Karnataka Weather | 21-03-2024 | ಇಂದು ರಾಜ್ಯದ ಹಲವು ಕಡೆ ತುಂತುರು ಮಳೆ | ಮಲೆನಾಡು ಭಾಗದಲ್ಲಿ ಒಂದು ವಾರ ಮಳೆಯ ವಾತಾವರಣ |

March 21, 2024
11:21 AM
ರಾಜ್ಯದ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಲಿದೆ.

22.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಕೊಡಗು ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಹೊರನಾಡು, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ, ಚಾಮರಾಜನಗರ ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.  ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ರಾಜ್ಯದ ದಕ್ಷಿಣ ಕರಾವಳಿ (ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು) ಹಾಗೂ ಮಲೆನಾಡು ಭಾಗಗಳಲ್ಲಿ ಇನ್ನೂ ಒಂದು ವಾರದ ಕಾಲ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ
₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror