22.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಕೊಡಗು ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಹೊರನಾಡು, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ, ಚಾಮರಾಜನಗರ ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಕರಾವಳಿ (ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು) ಹಾಗೂ ಮಲೆನಾಡು ಭಾಗಗಳಲ್ಲಿ ಇನ್ನೂ ಒಂದು ವಾರದ ಕಾಲ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…