19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಚಲನೆಯ ದಿಕ್ಕು ನಿಖರತೆ ಇಲ್ಲದಿರುವುದರಿಂದ ಕರಾವಳಿ ಭಾಗಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಎಲ್ಲಾ ಕಡೆ ಮಳೆಯಾಗುತ್ತಿಲ್ಲ. ಸುಳ್ಯ ತಾಲೂಕಿನ ಪೂರ್ವ ಭಾಗ ಹಾಗೂ ದಕ್ಷಿಣ ಭಾಗದಲ್ಲಿ ಘಟ್ಟ ಪ್ರದೇಶವಾದ್ದರಿಂದ ಹೆಚ್ಚು ಮಳೆಯಾಗುತ್ತಿದೆ. ಉತ್ತರ ಕನ್ನಡದ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.ಹಾವೇರಿ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು ಮಾರುತಗಳು ಪ್ರಭಲವಾಗಿ ಅಂಡಮಾನ್ ಕಡೆ ಚಲಿಸಲು ಆರಂಭವಾಗಿದ್ದು, ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ. ಈ ತಿರುಗುವಿಕೆಯು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದ್ದು ಮೇ 25 ಅಥವಾ 26ರಂದು ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಮುಂಗಾರು ಮುಂದುವರಿಕೆಯು ಈ ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಅವಲಂಬಿಸಿದೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…