Advertisement
ವೆದರ್ ಮಿರರ್

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

Share

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಚಲನೆಯ ದಿಕ್ಕು ನಿಖರತೆ ಇಲ್ಲದಿರುವುದರಿಂದ ಕರಾವಳಿ ಭಾಗಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಎಲ್ಲಾ ಕಡೆ ಮಳೆಯಾಗುತ್ತಿಲ್ಲ. ಸುಳ್ಯ ತಾಲೂಕಿನ ಪೂರ್ವ ಭಾಗ ಹಾಗೂ ದಕ್ಷಿಣ ಭಾಗದಲ್ಲಿ ಘಟ್ಟ ಪ್ರದೇಶವಾದ್ದರಿಂದ ಹೆಚ್ಚು ಮಳೆಯಾಗುತ್ತಿದೆ. ಉತ್ತರ ಕನ್ನಡದ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.ಹಾವೇರಿ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು ಮಾರುತಗಳು ಪ್ರಭಲವಾಗಿ ಅಂಡಮಾನ್‌  ಕಡೆ ಚಲಿಸಲು ಆರಂಭವಾಗಿದ್ದು, ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ. ಈ ತಿರುಗುವಿಕೆಯು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದ್ದು ಮೇ 25 ಅಥವಾ 26ರಂದು ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಮುಂಗಾರು ಮುಂದುವರಿಕೆಯು ಈ ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಅವಲಂಬಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

12 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

12 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

12 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

12 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

13 hours ago

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

1 day ago