Karnataka Weather | 20-05-2024 | ಕರಾವಳಿಯಾದ್ಯಂತ ಮುಂಗಾರು ರೀತಿಯ ವಾತಾವರಣ | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಪರಿಣಾಮ ಮುಂಗಾರು ದುರ್ಬಲವಾಗುವ ಸಾಧ್ಯತೆ |

May 20, 2024
11:16 AM
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ ವಾರದಲ್ಲಿ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ವರದಿಗಳಿವೆ, ಹಾಗೂ ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.

21.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಉತ್ತಮ, ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಮೂಡಬಿದರೆ, ಬೆಳ್ತಂಗಡಿ, ಉಡುಪಿಯ ಕಾರ್ಕಳ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. (ಕರಾವಳಿಯಾದ್ಯಂತ ಮುಂಗಾರು ರೀತಿಯ ವಾತಾವರಣ ಉಂಟಾಗಲಿದೆ).

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. (ಚಿಕ್ಕಮಗಳೂರು, ಶಿವಮೊಗ್ಗ ಅಲ್ಲಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ). ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಚಿತ್ರದುರ್ಗ ದಕ್ಷಿಣ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಉತ್ತರ, ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಬಳ್ಳಾರಿ, ಧಾರವಾಡ, ಬೆಳಗಾವಿ, ಗದಗ ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೇ 22 ರಿಂದ ಬಂಗಾಳಕೊಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ಮೇ 25 ಅಥವಾ 26 ರಂದು ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲವಾರದಲ್ಲಿ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ವರದಿಗಳಿವೆ, ಹಾಗೂ ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror