21.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಉತ್ತಮ, ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಮೂಡಬಿದರೆ, ಬೆಳ್ತಂಗಡಿ, ಉಡುಪಿಯ ಕಾರ್ಕಳ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. (ಕರಾವಳಿಯಾದ್ಯಂತ ಮುಂಗಾರು ರೀತಿಯ ವಾತಾವರಣ ಉಂಟಾಗಲಿದೆ).
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. (ಚಿಕ್ಕಮಗಳೂರು, ಶಿವಮೊಗ್ಗ ಅಲ್ಲಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ). ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಚಿತ್ರದುರ್ಗ ದಕ್ಷಿಣ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಉತ್ತರ, ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಬಳ್ಳಾರಿ, ಧಾರವಾಡ, ಬೆಳಗಾವಿ, ಗದಗ ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೇ 22 ರಿಂದ ಬಂಗಾಳಕೊಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ಮೇ 25 ಅಥವಾ 26 ರಂದು ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲವಾರದಲ್ಲಿ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ವರದಿಗಳಿವೆ, ಹಾಗೂ ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.
ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಪೂರೈಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ…
ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ…
ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ,…
ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು…
ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ…
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 30…