22.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಂಗಳೂರು ಸ್ವಲ್ಪ ಜಾಸ್ತಿಯೇ ಇರಬಹುದು.
ಕೊಡಗು ಉತ್ತಮ (ಸೋಮವಾರಪೇಟೆ ಸಾಮಾನ್ಯ), ಹಾಸನ ಸಾಮಾನ್ಯ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ ಕುದುರೆಮುಖ ಉತ್ತಮ, ಉಳಿದ ಭಾಗಗಳಲ್ಲಿ ಸಾಮಾನ್ಯ, ಶಿವಮೊಗ್ಗದ ಹೊಸನಗರ, ಸಾಗರ ಸುತ್ತಮುತ್ತ ಉತ್ತಮ, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಮೇ 23 ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆಮೇಲೆ ಕರಾವಳಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಮೇ 22 ರಂದು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇ 26ರಂದು ಮ್ಯಾನ್ಮಾರ್, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುತ್ತಿದ್ದಂತೆಯೇ ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವ ಸಾಧ್ಯತೆಯಿದೆ.