02.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಮೊಡ ವಾತಾವರಣದೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಚಿತ್ರದುರ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜೂನ್ 1ರಂದು ಅಂದರೆ ಇವತ್ತು ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ. ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು ಮುಂಗಾರು ಆರಂಭ ದುರ್ಬಲಗೊಂಡಿದೆ. ಇನ್ನು ಎರಡು ದಿನಗಳ ಕಾಲ ಪೂರ್ವದ ಮೋಡಗಳಿಂದ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.