23.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದು ವಾತಾವರಣದೊಂದಿಗೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 23ರಿಂದ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಮಾರ್ಚ್ 28ರಿಂದ ದಕ್ಷಿಣ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಪುನರಾರಂಭಗೊಳ್ಳುವ ಲಕ್ಷಣಗಳಿವೆ. ಆದರೆ ಒಳನಾಡು ಭಾಗಗಳಲ್ಲಿ ಸಧ್ಯಕ್ಕೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…