09.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರದ ತಾಲ್ಲೂಕುಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಭಾರಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಚಿಕ್ಕೋಡಿ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಚಿತ್ರದುರ್ಗ ಉತ್ತರ ಭಾಗ, ದಾವಣಗೆರೆ, ಹಾವೇರಿ, ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಯಾದಗಿರಿ, ಕಲಬುರ್ಗಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೀದರ್ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಹಾರಾಷ್ಟ್ರ ಕರಾವಳಿಯಲ್ಲಿ ವಾಯುನಿಮ್ನತೆ (ಕಡಿಮೆ ಒತ್ತಡ) ಉಂಟಾಗಿದ್ದು, ಮುಂಗಾರು ಮಾರುತಗಳು ಗೋವಾ ಕರಾವಳಿ ಮೂಲಕ ಕೇಂದ್ರಿತವಾಗಿ ಸಾಗುತ್ತಿದೆ. ಈ ವಾಯುನಿಮ್ನತೆಯು ಮತ್ತಷ್ಟು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದ್ದು, ಕರ್ನಾಟಕದಲ್ಲಿ ಜೂ. 10ರಿಂದ ಮಳೆ ಕ್ಷೀಣಿಸಲಿದೆ.
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…