19.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ತೀರ ಭಾಗದಿಂದ ಈಚೆಗೆ ನಿರೀಕ್ಷೆಗಿಂತ ಕಡಿಮೆ ಮಳೆಯಾಗುತ್ತಿರುವುದರಿಂದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮೈಸೂರು ಉತ್ತರ ಭಾಗ, ಬೆಂಗಳೂರು ಉತ್ತರ, ತುಮಕೂರು ಒಂದೆರಡು ಭಾಗಗಳಲ್ಲಿ, ಚಿತ್ರದುರ್ಗ ಪಶ್ಚಿಮ ಭಾಗದಲ್ಲಿ ಮಳೆಯ ಮುನ್ಸೂಚೆನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಜೂನ್ 21ರಿಂದ ಮುಂಗಾರು ಚುರುಕಾಗೊಳ್ಳುವ ಲಕ್ಷಣಗಳಿದ್ದು, ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಜೂನ್ 28 ರಿಂದ ಮುಂಗಾರು ಉತ್ತರಕ್ಕೆ ಚಲಿಸುವ ಸಾಧ್ಯತೆ ( ಮಹಾರಾಷ್ಟ್ರ, ಗುಜರಾತ್ ಕಡೆಗೆ) ಇರುವುದರಿಂದ ಕರ್ನಾಟಕದಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವ ಸಾಧ್ಯತೆಯಿದೆ.