18.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಈಗ ಉತ್ತರಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಮೋಡಗಳು ವಾಯವ್ಯದಿಂದ ಆಗ್ನೇಯಕ್ಕೆ ಚಲಿಸುತ್ತಿವೆ. ಇನ್ನೂ 2 ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮತ್ತು ಒಂದೆರಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 20ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಈ ವಾತಾವರಣವು ಸೆಪ್ಟೆಂಬರ್ 20ರ ತನಕವೂ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಮೋಡ ಹಾಗೂ ಉತ್ತರ ಒಳನಾಡಿನ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 21ರಿಂದ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ.
ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.…
ಸಾಹಿತ್ಯ, ಕಲಾ ರಂಗದೊಳಗೆ ಒಮ್ಮೆ ಇಣುಕಿ. ಬಹುತೇಕರ ಹೆಸರಿನÀ ಹಿಂದೆ ಬಿರುದುಗಳು ಅಂಟಿಕೊಂಡಿದೆ.…
2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…
ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ…