ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಕೆಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ಒಣಹವೆ ಇತ್ತು. ಕಾರ್ಕಳ, ಉಪ್ಪಿನಂಗಡಿ, ಪುತ್ತೂರು, ಶಿರಾ, ಭಾಗಮಂಡಲ, ತಿಪಟೂರಿನಲ್ಲಿ ಇಂದು ತಲಾ 1 ಸೆಂಟಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಯಾದಗರಿ, ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಸಂಭವ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…