ಹವಾಮಾನ ವರದಿ | 02-11-2024 | ಕೆಲವು ಕಡೆ ಸಂಜೆಯ ವೇಳೆ ಮಳೆ ಸಾಧ್ಯತೆ | ನ.9 ರಿಂದ ಮತ್ತೆ ಹಿಂಗಾರು ಚುರುಕಾಗುವ ಲಕ್ಷಣ |

November 2, 2024
12:51 PM
ಈಗಿನಂತೆ ನವೆಂಬರ್ 4ರಿಂದ ಮಳೆ ಕಡಿಮೆಯಾಗಲಿದ್ದು, ನವೆಂಬರ್ 9 ಮತ್ತೆ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.

03.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಒಂದೆರಡು ಕಡೆ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 5ರಿಂದ ಮಳೆ ಕಡಿಮೆಯಾಗಲಿದ್ದು, ನವೆಂಬರ್ 9ರಿಂದ ಮತ್ತೆ ಚುರುಕಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗಿನ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 4ರಿಂದ ಮಳೆ ಕಡಿಮೆಯಾಗಲಿದ್ದು, ನವೆಂಬರ್ 9 ಮತ್ತೆ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಗಡಿಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 5ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು ನವೆಂಬರ್ 9 ಅಥವಾ 10ರಿಂದ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ.

ನವೆಂಬರ್ 4ರಂದು ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತದಂತಹ ತಿರುವಿಕೆಯ ಪರಿಣಾಮದಿಂದ ಹಿಂಗಾರು ದುರ್ಬಲಗೊಳ್ಳುವ ಲಕ್ಷಣಗಳಿದ್ದು, ಈ ತಿರುಗುವಿಕೆಯು ತಮಿಳುನಾಡು ಕರಾವಳಿ ಕಡೆಗೆ ಚಲಿಸುವ ಸಾಧ್ಯತೆಗಳಿವೆ. ನವೆಂಬರ್ 9ರ ಸುಮಾರಿಗೆ ಈ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ಹಿಂಗಾರು ಮತ್ತೆ ಚುರುಕಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ
March 30, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror