03.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಒಂದೆರಡು ಕಡೆ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 5ರಿಂದ ಮಳೆ ಕಡಿಮೆಯಾಗಲಿದ್ದು, ನವೆಂಬರ್ 9ರಿಂದ ಮತ್ತೆ ಚುರುಕಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗಿನ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 4ರಿಂದ ಮಳೆ ಕಡಿಮೆಯಾಗಲಿದ್ದು, ನವೆಂಬರ್ 9 ಮತ್ತೆ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಗಡಿಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 5ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು ನವೆಂಬರ್ 9 ಅಥವಾ 10ರಿಂದ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ.
ನವೆಂಬರ್ 4ರಂದು ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತದಂತಹ ತಿರುವಿಕೆಯ ಪರಿಣಾಮದಿಂದ ಹಿಂಗಾರು ದುರ್ಬಲಗೊಳ್ಳುವ ಲಕ್ಷಣಗಳಿದ್ದು, ಈ ತಿರುಗುವಿಕೆಯು ತಮಿಳುನಾಡು ಕರಾವಳಿ ಕಡೆಗೆ ಚಲಿಸುವ ಸಾಧ್ಯತೆಗಳಿವೆ. ನವೆಂಬರ್ 9ರ ಸುಮಾರಿಗೆ ಈ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ಹಿಂಗಾರು ಮತ್ತೆ ಚುರುಕಾಗುವ ಲಕ್ಷಣಗಳಿವೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…