04.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಉತ್ತರ ಕನ್ನಡ ಜಿಲ್ಲೆಯ ಉತ್ತರ ಕನ್ನಡ – ಗೋವಾ ಗಡಿಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನ. 5ರಿಂದ ಹಿಂಗಾರು ಮಳೆಯ ಕಡಿಮೆಯಾಗಲಿದ್ದು, ನ.8 ಅಥವಾ 9ರಿಂದ ಮತ್ತೆ ಮಳೆ ಚುರುಕಾಗುವ ಲಕ್ಷಣಗಳಿವೆ.
ಕೊಡಗಿನ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಸುತ್ತಮುತ್ತ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ನ. 5ರಿಂದ 7ರ ತನಕ ಮಳೆ ಕಡಿಮೆಯಾಗಲಿದ್ದು, 8 ಅಥವಾ 9ರಿಂದ ಹಿಂಗಾರು ಮತ್ತೆ ಚುರುಕಾಗುವ ಲಕ್ಷಣಗಳಿವೆ.
ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ, ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ದಕ್ಷಿಣ ಹಾಗೂ ಪಶ್ಚಿಮ ಭಾಗಗಳಲ್ಲಿ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನ.5ರಿಂದ ಬಿಡುವು ಪಡೆವ ಹಿಂಗಾರು ನ. 8ರಿಂದ ಮತ್ತೆ ಚುರುಕಾಗುವ ಸಾಧ್ಯತೆಗಳಿವೆ.
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ತಿರುಗುವಿಕೆ ಉಂಟಾಗಿದ್ದು, ಇನ್ನೆರಡು ದಿನಗಳಲ್ಲಿ ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ. ಇದು ಆ ಕಡೆ ಚಲಿಸುತ್ತಿದ್ದಂತಯೇ ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು ನ.8ರ ಸುಮಾರಿಗೆ ಉತ್ತರ ಶ್ರೀಲಂಕಾ ಕರಾವಳಿ ಸಮೀಪ ತಲಪುವ ನಿರೀಕ್ಷೆಯಿದೆ. ಇವುಗಳ ಒಟ್ಟು ಪರಿಣಾಮ ನ.5ರಿಂದ ಹಿಂಗಾರು ದುರ್ಬಲಗೊಂಡು, ನ. 8ರಿಂದ ಮತ್ತೆ ಚುರುಕಾಗುವ ಸೂಚನೆಗಳಿವೆ.
ಹಾಸನಾಂಬೆ ದೇವಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಉತ್ಸವದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದ್ದು …
ಅಕ್ಕಿ, ಗೋಧಿ, ಸಕ್ಕರೆಯಿಂದ ರೋಗಗಳು ಬರುತ್ತಿವೆ. ಪ್ಲಾಸ್ಟಿಕ್ ಕಣಗಳು ದೇಹವನ್ನು ಸೇರಿ ಲವಣಾಂಶಗಳು…
ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ ಎಂದು ಮುಖ್ಯಮಂತ್ರಿ…
ಒಂದು ಸಾವಿರ ಗಿಗಾವ್ಯಾಟ್ ಸೌರಶಕ್ತಿ ಸಾಮರ್ಥ್ಯದ ಸ್ಥಾಪನೆ ಮತ್ತು ಪ್ರತಿವರ್ಷ ಒಂದು ಸಾವಿರ…
ಎಲ್ಲಾ ಧರ್ಮಗಳು ಇರುವುದು ಬಡವರ, ಸಾಮಾನ್ಯ ಜನರ ಹಿತ ರಕ್ಷಣೆಗಾಗಿಯೇ ಹೊರತು ರಿಯಲ್…
ಈಶಾನ್ಯ ರಾಜ್ಯಗಳ ಮೂಲಕ ಭಾರತಕ್ಕೆ ಕಳ್ಳದಾರಿಯ ಮೂಲಕ ಸಾಗಾಟವಾಗುವ ಬರ್ಮಾ ಅಡಿಕೆ ಇನ್ನೂ…