ಹವಾಮಾನ ವರದಿ | 27-12-2024 | ರಾಜ್ಯದ ಕೆಲವು ಕಡೆ ಮೋಡ-ತುಂತುರು ಮಳೆ ಸಾಧ್ಯತೆ |

December 27, 2024
11:28 AM
ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ರೀತಿಯ ಮಾರುತಗಳು ಬರುತ್ತಿರುವುದರಿಂದ ಈಗಿನ ಈ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಠಿಯಾಗಿದೆ. ಡಿಸೆಂಬರ್ 30 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿದ್ದು, ಜನವರಿಯಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

28.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಡಿಸೆಂಬರ್ 28ರಂದು ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, 29ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಸಂಜೆ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ ಜಿಲ್ಲೆಯಲ್ಲಿ ಮೋಡ ಹಾಗೂ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಈಗ ಡಿಸೆಂಬರ್ 28ರಂದು ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, 29ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸುವ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಬೆಳಗಾವಿ, ಧಾರವಾಡ, ಹಾವೇರಿ ಭಾಗಗಳಲ್ಲಿ ಸಂಜೆ ಹಾಗೂ ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಬೆಳಿಗ್ಗೆ, ಮಧ್ಯಾಹ್ನ ನಂತರ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ ಈಗಾಗಲೇ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದು, ಕೋಲಾರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲೂ ಬೆಳಿಗ್ಗೆ, ಮಧ್ಯಾಹ್ನ ನಂತರ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಡಿಸೆಂಬರ್ 28ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ರೀತಿಯ ಮಾರುತಗಳು ಬರುತ್ತಿರುವುದರಿಂದ ಈಗಿನ ಈ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಠಿಯಾಗಿದೆ. ಡಿಸೆಂಬರ್ 30ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿದ್ದು, ಜನವರಿಯಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror