Karnataka Weather | 27-03-2024 | ರಾಜ್ಯದಲ್ಲಿ ಒಣ ಹವೆ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

March 27, 2024
12:49 PM
ಮುಂದಿನ 10 ದಿನಗಳವರೆಗೂ ರಾಜ್ಯದ ದಕ್ಷಿಣ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆಯ ವೇಳೆಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ಗುಡುಗು ಸಹಿತ ಒಂದು ಅಥವಾ ಎರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ.

28.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತದ ಒಂದೆರಡು ಕಡೆ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು ಸಂಜೆ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಣ್ಣ ಪ್ರಮಾಣದ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ದಕ್ಷಿಣ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆಯ ವೇಳೆಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ಗುಡುಗು ಸಹಿತ ಒಂದು ಅಥವಾ ಎರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…
September 29, 2026
7:28 AM
by: ದ ರೂರಲ್ ಮಿರರ್.ಕಾಂ
‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror