29.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಾರ್ಕಳ, ಮೂಡಬಿದರೆ, ಪಡುಬಿದ್ರಿ, ಸುರತ್ಕಲ್, ಮಂಗಳೂರು, ಕಾಸರಗೋಡು ಸುತ್ತಮುತ್ತ ಪ್ರದೇಶದಲ್ಲಿ ಸಂಜೆ, ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ ಮೋಡದ ವಾತಾವರಣ ಇರಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ. ಬೆಳಗಾವಿಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದ್ದು, ಧಾರವಾಡ ಮೋಡದ ವಾತಾವರಣದ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 31ರಿಂದ ಎಪ್ರಿಲ್ 4ರ ಮಧ್ಯೆ ಕೊಡಗಿನ ಒಂದೆರಡು ಕಡೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.