Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |

March 28, 2024
1:19 PM
ಇಂದು ಹಲವು ಕಡೆ ತುಂತುರು ಮಳೆ ನಿರೀಕ್ಷೆ ಇದೆ. ಮಾರ್ಚ್ 31ರಿಂದ ಎಪ್ರಿಲ್ 4ರ ಮಧ್ಯೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

29.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಾರ್ಕಳ, ಮೂಡಬಿದರೆ, ಪಡುಬಿದ್ರಿ, ಸುರತ್ಕಲ್, ಮಂಗಳೂರು, ಕಾಸರಗೋಡು ಸುತ್ತಮುತ್ತ ಪ್ರದೇಶದಲ್ಲಿ ಸಂಜೆ, ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ ಮೋಡದ ವಾತಾವರಣ ಇರಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ. ಬೆಳಗಾವಿಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದ್ದು, ಧಾರವಾಡ ಮೋಡದ ವಾತಾವರಣದ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಮಾರ್ಚ್ 31ರಿಂದ ಎಪ್ರಿಲ್ 4ರ ಮಧ್ಯೆ ಕೊಡಗಿನ ಒಂದೆರಡು ಕಡೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಜೀವ ವೈವಿಧ್ಯ ಅನುದಾನ ಬಿಡುಗಡೆ – ಕರ್ನಾಟಕಕ್ಕೆ ₹10.49 ಲಕ್ಷ; ದೇಶದ 30 ಮಂಡಳಿಗಳಿಗೆ ₹1.19 ಕೋಟಿ
October 19, 2026
4:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-10-2026 | ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಲಕ್ಷಣ
October 19, 2026
3:45 PM
by: ದ ರೂರಲ್ ಮಿರರ್.ಕಾಂ
ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror