Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

May 17, 2024
1:00 PM
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಮೇ 17 ರಿಂದ 23ರ ತನಕ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

18.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹೆಚ್ಚಿನ ಭಾಗಗಳಲ್ಲಿ, ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.ಚಿತ್ರದುರ್ಗ, ದಾವಣಗೆರೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಮೇ 17 ರಿಂದ 23ರ ತನಕ ರಾಜ್ಯದ ದಕ್ಷಿಣ ಕರಾವಳಿ (ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು), ಮಲೆನಾಡು ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror