ಹವಾಮಾನ ವರದಿ | 04-07-2024 | ಕರಾವಳಿ ಜಿಲ್ಲೆಗಳಾದ್ಯಂತ ಮಳೆ | ಜು.9 ರಿಂದ ರಾಜ್ಯದಲ್ಲೂ ಮಳೆ ಕ್ಷೀಣಿಸುವ ಸಾಧ್ಯತೆ |

July 4, 2024
2:08 PM
ಜುಲೈ 5ರ ನಂತರ ದುರ್ಬಲಗೊಂಡು ಸಾಂಪ್ರದಾಯಿಕ ಮುಂಗಾರು ಮಾರುತಗಳು ಬಲಗೊಳ್ಳುವ ಲಕ್ಷಣಗಳಿವೆ. ಜುಲೈ 9ರಿಂದ ರಾಜ್ಯದಲ್ಲೂ ಮಳೆಯ ಕ್ಷೀಣಿಸುವ ಸಾಧ್ಯತೆಗಳಿವೆ. ನಂತರ ಮುಂಗಾರು ಚುರುಕಾಗಬೇಕಿದೆ.

05.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.  ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾವೇರಿ, ಧಾರವಾಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಯಾದಗಿರಿ ಆಂದ್ರಾ ಗಡಿ ಭಾಗಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ದಕ್ಷಿಣ ದ್ರುವ ಭಾಗದಿಂದ ಬರುತ್ತಿರುವ ಮಾರುತಗಳು ಜುಲೈ 5ರ ನಂತರ ದುರ್ಬಲಗೊಂಡು ಸಾಂಪ್ರದಾಯಿಕ ಮುಂಗಾರು ಮಾರುತಗಳು ಬಲಗೊಳ್ಳುವ ಲಕ್ಷಣಗಳಿವೆ. ಜುಲೈ 9ರಿಂದ ರಾಜ್ಯದಲ್ಲೂ ಮಳೆಯ ಕ್ಷೀಣಿಸುವ ಸಾಧ್ಯತೆಗಳಿವೆ. ನಂತರ ಮುಂಗಾರು ಚುರುಕಾಗಬೇಕಿದೆ. ಈ ನಡುವೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಒಂದೆರಡು ದಿನ ಮಳೆಯ ಮುನ್ಸೂಚನೆ ಇದ್ದು, ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror