Advertisement
ಸುದ್ದಿಗಳು

ಹವಾಮಾನ ವರದಿ | 09.12.2024 | ರಾಜ್ಯದ ಕೆಲವು ಕಡೆ ಇಂದೂ ಮಳೆ ಸಾಧ್ಯತೆ | ಡಿ.13 ರವರೆಗೂ ಮಳೆ ನಿರೀಕ್ಷೆ |

Share

10.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.ಈಗಿನಂತೆ ಡಿ. 10ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ ಡಿ. 12 ಹಾಗೂ 13ರಂದು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. ನಂತರ ಕಡಮೆಯಾಗುವ ಸಾಧ್ಯತೆಗಳಿವೆ.

ಕೊಡಗು, ಹಾಸನ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಈಗಿನಂತೆ ಡಿ 10 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ 12 ರಂದು ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. 13 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಹಾಗೂ ವಿಜಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಆವರಿಸುವ ಮುನ್ಸೂಚನೆ ಇದೆ.

ಈಗಿನಂತೆ ಡಿ. 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ, ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಡಿ. 12 ಹಾಗೂ 13ರಂದು ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. ನಂತರ ಒಣಹವೆ ಆವರಿಸುವ ಸಾಧ್ಯತೆಗಳಿವೆ.
ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯ ಶ್ರೀಲಂಕಾ ಬಳಿ ತಲುಪಿರುವ ವಾಯುಭಾರ ಕುಸಿತವು ಡಿ. 12ರಂದು ಉತ್ತರ ಶ್ರೀಲಂಕಾ ಸಮೀಪದ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದ್ದು. ಡಿ. 14 ರಂದು ದಕ್ಷಿಣ ಕೇರಳ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಬಂಗಾಳಕೊಲ್ಲಿಯಲ್ಲಿ ಡಿ. 17 ಹಾಗೂ 21ರಂದು ಇನ್ನೆರಡು ವಾಯುಭಾರ ಕುಸಿತಗಳು ಉಂಟಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

22 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago