Advertisement
ವೆದರ್ ಮಿರರ್

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

Share

 07.03.2026ರ ಬೆಳಿಗ್ಗೆ 8 ಗಂಟೆಯವರೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಹವಾಮಾನದಲ್ಲಿ ಸ್ವಲ್ಪ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ.

ಕರಾವಳಿ ಭಾಗವಾದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚಿನ ಕಡೆಗಳಲ್ಲಿ ಮೋಡದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಬದಲಾದ ಹವಾಮಾನದ ಪರಿಸ್ಥಿತಿಯಲ್ಲಿ ಈ ದಿಢೀರ್‌ ಬೆಳವಣಿಗೆಯಾಗಿದೆ. ಅರಬ್ಬಿ ಸಮುದ್ರದ ಗಾಳಿ ಪರಿಣಾಮದಿಂದ  ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಕೆಲವೆಡೆ ತುಂತುರು ಹನಿ ಮಳೆಯ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಮುಂಜಾನೆ ಸಮಯದಲ್ಲಿ ಹಿಮ (dew) ಹೆಚ್ಚಾಗುವ ಸಾಧ್ಯತೆಯೂ ಇದೆ.

ಮೇಲ್ಸ್ತರದ ಗಾಳಿಯ ಚಲನೆಯ ಪರಿಣಾಮವಾಗಿ ಮಧ್ಯಾಹ್ನದ ಬಳಿಕ ಅರಬ್ಬಿ ಸಮುದ್ರದ ಕಡೆಯಿಂದ ಕರಾವಳಿ ಭಾಗಗಳತ್ತ ಗಾಳಿ ಬೀಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಕೆಲವು ಕಡೆಗಳಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯೂ ಸಂಭವಿಸಬಹುದು ಎಂದು ಅಂದಾಜಿಸಲಾಗಿದೆ.

ರಾಜ್ಯದ ಮಲೆನಾಡು ಭಾಗಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದ್ದರೂ ಮಳೆಯ ಸಾಧ್ಯತೆ ಹೆಚ್ಚಾಗಿ ಕಾಣಿಸುತ್ತಿಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇನ್ನು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಮಧ್ಯಾಹ್ನದ ನಂತರ ಕೆಲವೆಡೆ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಮಳೆಯ ಸಾಧ್ಯತೆ ಬಹಳ ಕಡಿಮೆ ಎಂದು ಮುನ್ಸೂಚನೆ ತಿಳಿಸಿದೆ.

ಈ ನಡುವೆ ಉತ್ತರ ಭಾರತದ ಉಷ್ಣ ಮಾರುತಗಳ ಪರಿಚಲನೆ ಮೇಲ್ಸ್ತರದಲ್ಲಿ ದುರ್ಬಲವಾಗಿದ್ದು, ಮಧ್ಯಮ ಸ್ತರದಲ್ಲಿ ಮಾತ್ರ ಪ್ರಭಲವಾಗಿದೆ ಎಂದು ಹವಾಮಾನ ವಿಶ್ಲೇಷಣೆ ತಿಳಿಸಿದೆ.

Cloudy conditions are expected across coastal districts of Karnataka by afternoon, with a possibility of light drizzles in some foothill areas. Most interior and Malnad regions are likely to remain cloudy but with minimal chances of rainfall.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

2 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

21 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago