ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

August 10, 2026
3:32 PM

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

Advertisement

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಮಧ್ಯಪ್ರದೇಶದಲ್ಲಿ ಹೊಸದಾಗಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯ ಪರಿಣಾಮವಾಗಿ ಆ.11ರಂದು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, ಆ. 12ರಂದು ಕರಾವಳಿ ಭಾಗದಲ್ಲಿ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ.

ಕರಾವಳಿ ಕರ್ನಾಟಕ:
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಿನದಲ್ಲಿ ಎರಡು–ಮೂರು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಕಡೆ ಮಳೆ ಸ್ವಲ್ಪ ಹೆಚ್ಚಾಗಬಹುದು. ಆಗಸ್ಟ್‌ 12ರಂದು ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ನಂತರ ಮಳೆ ಪ್ರಮಾಣ ಕಡಿಮೆಯಾಗಬಹುದು. ಆದರೂ ಮುಂದಿನ 10 ದಿನಗಳವರೆಗೆ ದಿನದಲ್ಲಿ ಅಲ್ಲಲ್ಲಿ ಎರಡು–ಮೂರು ಕಡೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು:
ಕೊಡಗು, ಹಾಸನದ ಸಕಲೇಶಪುರ ಸುತ್ತಮುತ್ತ ಹಾಗೂ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಮಧ್ಯಪ್ರದೇಶದ ತಿರುವಿಕೆಯ ಪರಿಣಾಮವಾಗಿ ಆ. 11ರಂದು ಮಲೆನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಉತ್ತರ ಒಳನಾಡು:
ಹಾವೇರಿ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಮುಂದಿನ 10 ದಿನಗಳವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು:
ಮೈಸೂರು ಜಿಲ್ಲೆಯ ಒಂದೆರಡು ಕಡೆ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೆ ದಕ್ಷಿಣ ಒಳನಾಡಿನಲ್ಲೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಕೃಷಿಕರಿಗೆ ಗಮನಿಸಿ:
ಕರಾವಳಿ ಮತ್ತು ಮಲೆನಾಡಿನಲ್ಲಿ ಆ. 11–12ರಂದು ಮಳೆಯ ಪ್ರಮಾಣದಲ್ಲಿ ಏರಿಳಿತವಾಗುವ ಸಾಧ್ಯತೆ ಇರುವುದರಿಂದ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಾಗ ಸ್ಥಳೀಯ ಮಳೆಯ ಪರಿಸ್ಥಿತಿಯನ್ನು ಗಮನಿಸುವುದು ಸೂಕ್ತ.

Karnataka is likely to experience scattered normal rainfall over the next 10 days. Coastal and Malnad districts may see intermittent normal rain on August 11, with rainfall likely to increase slightly along the coast on August 12 due to a new weather system over Madhya Pradesh. North Interior Karnataka may receive isolated rain, while South Interior districts may experience evening thunderstorms.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror