ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಲು ಹಾಗೂ ಮೋಡ ಮಿಶ್ರ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮಳೆಯ ಪ್ರಮಾಣ ರಾಜ್ಯಾದ್ಯಂತ ಕಡಿಮೆಯಾಗಿ ಕಾಣಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳು : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಸಂಜೆಯ ವೇಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಧರ್ಮಸ್ಥಳ, ಮತ್ತು ಉಡುಪಿ ಜಿಲ್ಲೆಯ ಕಾರ್ಕಳ, ಸೋಮೇಶ್ವರ, ಹೆಬ್ರಿ ಸುತ್ತಮುತ್ತ ಪ್ರದೇಶಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಮಳೆ ಸಾಧ್ಯತೆ ಕಡಿಮೆ ಇದ್ದು ಬಿಸಿಲು ವಾತಾವರಣ ಇರಲಿದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಬಿಸಿಲು-ಮೋಡ ಮಿಶ್ರ ವಾತಾವರಣ ಮುಂದುವರಿಯಲಿದೆ.
ಕರಾವಳಿ ಜಿಲ್ಲೆಗಳ ಸಮೀಪದ ಕೆಲವು ಪ್ರದೇಶಗಳಲ್ಲಿ ಮಾತ್ರ ತುಂತುರು ಮಳೆಯ ಸಾಧ್ಯತೆ ಇದೆ. ಇಲ್ಲಿನ ಚಳಿಯ ಪ್ರಮಾಣ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಉತ್ತರ ಒಳನಾಡು : ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಗಾಳಿ ಮತ್ತು ಹಗುರ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಇಲ್ಲ ಎಂದು ತಿಳಿಸಲಾಗಿದೆ.
ದಕ್ಷಿಣ ಒಳನಾಡು : ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದ್ದು, ಮಳೆ ಸಂಭವಿಸುವ ಸಾಧ್ಯತೆ ಕಾಣುತ್ತಿಲ್ಲ.
ಹವಾಮಾನ ಕಾರಣ : ಬಂಗಾಳಕೊಲ್ಲಿಯ ತಿರುಗುವಿಕೆ ಕ್ರಮೇಣ ಶಿಥಿಲಗೊಂಡಿರುವುದರಿಂದ ರಾಜ್ಯದಲ್ಲಿ ಮಳೆಯ ಚಟುವಟಿಕೆ ತಗ್ಗಲಿದೆ. ಇದೇ ವೇಳೆ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಭಾರಿ ಹಿಮಪಾತ ಹಾಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ





