Advertisement
ವೆದರ್ ಮಿರರ್

ಹವಾಮಾನ ವರದಿ | 27-01-2026 | ಕರಾವಳಿಯಲ್ಲಿ ತುಂತುರು ಮಳೆ, ಉಳಿದಡೆ ಬಿಸಿಲು-ಮೋಡ

Share

ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಲು ಹಾಗೂ ಮೋಡ ಮಿಶ್ರ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮಳೆಯ ಪ್ರಮಾಣ ರಾಜ್ಯಾದ್ಯಂತ ಕಡಿಮೆಯಾಗಿ ಕಾಣಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.  ಸಂಜೆಯ ವೇಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಧರ್ಮಸ್ಥಳ, ಮತ್ತು ಉಡುಪಿ ಜಿಲ್ಲೆಯ ಕಾರ್ಕಳ, ಸೋಮೇಶ್ವರ, ಹೆಬ್ರಿ ಸುತ್ತಮುತ್ತ ಪ್ರದೇಶಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಮಳೆ ಸಾಧ್ಯತೆ ಕಡಿಮೆ ಇದ್ದು ಬಿಸಿಲು ವಾತಾವರಣ ಇರಲಿದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಬಿಸಿಲು-ಮೋಡ ಮಿಶ್ರ ವಾತಾವರಣ ಮುಂದುವರಿಯಲಿದೆ.
ಕರಾವಳಿ ಜಿಲ್ಲೆಗಳ ಸಮೀಪದ ಕೆಲವು ಪ್ರದೇಶಗಳಲ್ಲಿ ಮಾತ್ರ ತುಂತುರು ಮಳೆಯ ಸಾಧ್ಯತೆ ಇದೆ. ಇಲ್ಲಿನ ಚಳಿಯ ಪ್ರಮಾಣ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು : ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಗಾಳಿ ಮತ್ತು ಹಗುರ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಇಲ್ಲ ಎಂದು ತಿಳಿಸಲಾಗಿದೆ.

ದಕ್ಷಿಣ ಒಳನಾಡು :  ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದ್ದು, ಮಳೆ ಸಂಭವಿಸುವ ಸಾಧ್ಯತೆ ಕಾಣುತ್ತಿಲ್ಲ.

ಹವಾಮಾನ ಕಾರಣ :  ಬಂಗಾಳಕೊಲ್ಲಿಯ ತಿರುಗುವಿಕೆ ಕ್ರಮೇಣ ಶಿಥಿಲಗೊಂಡಿರುವುದರಿಂದ ರಾಜ್ಯದಲ್ಲಿ ಮಳೆಯ ಚಟುವಟಿಕೆ ತಗ್ಗಲಿದೆ. ಇದೇ ವೇಳೆ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಭಾರಿ ಹಿಮಪಾತ ಹಾಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

20 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

21 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

21 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

2 days ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago