ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

April 10, 2026
3:11 PM
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15 ನಂತರ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚು ಅನುಭವವಾಗುತ್ತಿದೆ.  ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಮುಂಜಾನೆ ಕೆಲವೆಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 15 ನಂತರ ಮಳೆ ಆರಂಭವಾಗುವ ಸೂಚನೆ ಇದೆ.

ಕೊಡಗು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ರಾತ್ರಿ ಅಥವಾ ಮುಂಜಾನೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.  ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಲಿದ್ದು, ಸಂಜೆ ಹಾಗೂ ರಾತ್ರಿ ಮೋಡ ಕವಿದ ವಾತಾವರಣ ಇರಲಿದೆ. ಕೊಡಗು ಹೊರತುಪಡಿಸಿ ಉಳಿದ ಮಲೆನಾಡು ಭಾಗಗಳಲ್ಲಿ ಏಪ್ರಿಲ್ 15ರವರೆಗೆ ಮಳೆಯ ಸಾಧ್ಯತೆ ಕಡಿಮೆ, ನಂತರ ಹೆಚ್ಚಾಗುವ ಲಕ್ಷಣಗಳಿವೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆಯೊಂದಿಗೆ ತಾಪಮಾನ ಹೆಚ್ಚಾಗಿ ಮುಂದುವರಿಯಲಿದೆ. ಮಳೆಯ ಯಾವುದೇ ಲಕ್ಷಣಗಳು ಸದ್ಯಕ್ಕೆ ಕಾಣುತ್ತಿಲ್ಲ. ಮೈಸೂರು, ಚಾಮರಾಜನಗರ, ಮಂಡ್ಯ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.ಉಳಿದ ಭಾಗಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಬಹುದು. ಪ್ರಸ್ತುತ ಪರಿಸ್ಥಿತಿಯಲ್ಲಿ ಏಪ್ರಿಲ್ 25ರವರೆಗೆ ಮಳೆಯ ಸಾಧ್ಯತೆ ಕಡಿಮೆ ಎಂದು ಅಂದಾಜಿಸಲಾಗಿದೆ.

ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವವು ನಿಧಾನವಾಗಿ ಬಲಗೊಳ್ಳುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಮಳೆಯ ಚಟುವಟಿಕೆಗೆ ಸಹಕಾರಿ ಆಗುವ ಸಾಧ್ಯತೆ ಇದೆ.

Karnataka is currently experiencing rising temperatures across most regions. Coastal and Kodagu areas may receive light rainfall, while the rest of the state remains mostly dry. Rainfall activity is expected to increase after April 15 due to strengthening winds from the Bay of Bengal.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ
June 14, 2026
3:27 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror