ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚು ಅನುಭವವಾಗುತ್ತಿದೆ. ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಮುಂಜಾನೆ ಕೆಲವೆಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 15 ನಂತರ ಮಳೆ ಆರಂಭವಾಗುವ ಸೂಚನೆ ಇದೆ.
ಕೊಡಗು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ರಾತ್ರಿ ಅಥವಾ ಮುಂಜಾನೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಲಿದ್ದು, ಸಂಜೆ ಹಾಗೂ ರಾತ್ರಿ ಮೋಡ ಕವಿದ ವಾತಾವರಣ ಇರಲಿದೆ. ಕೊಡಗು ಹೊರತುಪಡಿಸಿ ಉಳಿದ ಮಲೆನಾಡು ಭಾಗಗಳಲ್ಲಿ ಏಪ್ರಿಲ್ 15ರವರೆಗೆ ಮಳೆಯ ಸಾಧ್ಯತೆ ಕಡಿಮೆ, ನಂತರ ಹೆಚ್ಚಾಗುವ ಲಕ್ಷಣಗಳಿವೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆಯೊಂದಿಗೆ ತಾಪಮಾನ ಹೆಚ್ಚಾಗಿ ಮುಂದುವರಿಯಲಿದೆ. ಮಳೆಯ ಯಾವುದೇ ಲಕ್ಷಣಗಳು ಸದ್ಯಕ್ಕೆ ಕಾಣುತ್ತಿಲ್ಲ. ಮೈಸೂರು, ಚಾಮರಾಜನಗರ, ಮಂಡ್ಯ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.ಉಳಿದ ಭಾಗಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಬಹುದು. ಪ್ರಸ್ತುತ ಪರಿಸ್ಥಿತಿಯಲ್ಲಿ ಏಪ್ರಿಲ್ 25ರವರೆಗೆ ಮಳೆಯ ಸಾಧ್ಯತೆ ಕಡಿಮೆ ಎಂದು ಅಂದಾಜಿಸಲಾಗಿದೆ.
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…