ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

April 11, 2026
1:52 PM
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15 ನಂತರ ಮಳೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಹವಾಮಾನದಲ್ಲಿ ಹಂತ ಹಂತವಾಗಿ ಬದಲಾವಣೆ ಕಾಣುತ್ತಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯ ಚಟುವಟಿಕೆ ಆರಂಭವಾಗಿರುವ ಲಕ್ಷಣಗಳು ಗೋಚರಿಸುತ್ತಿವೆ.

ಕರಾವಳಿ ಭಾಗ :  ಕಾಸರಗೋಡು ಜಿಲ್ಲೆಯಲ್ಲಿ ಮೋಡ ಹಾಗೂ ಅಧಿಕ ತಾಪಮಾನವಿದ್ದು, ಸಂಜೆ ಮತ್ತು ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗಲು ಮೋಡ ಕವಿದ ವಾತಾವರಣವಿದ್ದು, ಘಟ್ಟದ ಕೆಳಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಮೋಡ ಮಿಶ್ರ ವಾತಾವರಣ ಮುಂದುವರಿಯಲಿದೆ.

ಮಲೆನಾಡು :  ಕೊಡಗು ಜಿಲ್ಲೆಯ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಸಮೀಪ ಪ್ರದೇಶಗಳಲ್ಲಿ ಮಳೆಯ ಚಟುವಟಿಕೆ ಕಂಡುಬರಬಹುದು.
ಶಿವಮೊಗ್ಗ ಸೇರಿ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.

 ಉತ್ತರ ಒಳನಾಡು:  ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಹಾಗೂ ಅಧಿಕ ತಾಪಮಾನ ಮುಂದುವರಿಯಲಿದೆ.
ಆದರೆ ಏಪ್ರಿಲ್ 17ರಿಂದ ಮಳೆ ಆರಂಭವಾಗುವ ಲಕ್ಷಣಗಳು ಕಂಡುಬರುತ್ತಿವೆ.

ದಕ್ಷಿಣ ಒಳನಾಡು :  ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಗಾಳಿಯ ಒತ್ತಡ ಹೆಚ್ಚಾದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯ ಭಾಗದಿಂದ ಗಾಳಿಯ ಪ್ರಭಾವ ಹೆಚ್ಚಾಗುತ್ತಿರುವ ಹಿನ್ನೆಲೆ,  ಏಪ್ರಿಲ್ 15 ನಂತರ ರಾಜ್ಯದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ ಇದೆ,  ಮಳೆ ವ್ಯಾಪ್ತಿ ಉತ್ತರ ಒಳನಾಡಿನತ್ತವೂ ವಿಸ್ತರಿಸಬಹುದು.

Karnataka is witnessing gradual weather changes with rainfall activity beginning in coastal and southern interior regions. While northern interior districts continue to experience high temperatures, rainfall is expected to expand across the state after April 15 due to strengthening winds from the Bay of Bengal.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror