ರಾಜ್ಯದಲ್ಲಿ ಹವಾಮಾನದಲ್ಲಿ ಹಂತ ಹಂತವಾಗಿ ಬದಲಾವಣೆ ಕಾಣುತ್ತಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯ ಚಟುವಟಿಕೆ ಆರಂಭವಾಗಿರುವ ಲಕ್ಷಣಗಳು ಗೋಚರಿಸುತ್ತಿವೆ.
ಕರಾವಳಿ ಭಾಗ : ಕಾಸರಗೋಡು ಜಿಲ್ಲೆಯಲ್ಲಿ ಮೋಡ ಹಾಗೂ ಅಧಿಕ ತಾಪಮಾನವಿದ್ದು, ಸಂಜೆ ಮತ್ತು ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗಲು ಮೋಡ ಕವಿದ ವಾತಾವರಣವಿದ್ದು, ಘಟ್ಟದ ಕೆಳಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಮೋಡ ಮಿಶ್ರ ವಾತಾವರಣ ಮುಂದುವರಿಯಲಿದೆ.
ಮಲೆನಾಡು : ಕೊಡಗು ಜಿಲ್ಲೆಯ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಸಮೀಪ ಪ್ರದೇಶಗಳಲ್ಲಿ ಮಳೆಯ ಚಟುವಟಿಕೆ ಕಂಡುಬರಬಹುದು.
ಶಿವಮೊಗ್ಗ ಸೇರಿ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.
ಉತ್ತರ ಒಳನಾಡು: ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಹಾಗೂ ಅಧಿಕ ತಾಪಮಾನ ಮುಂದುವರಿಯಲಿದೆ.
ಆದರೆ ಏಪ್ರಿಲ್ 17ರಿಂದ ಮಳೆ ಆರಂಭವಾಗುವ ಲಕ್ಷಣಗಳು ಕಂಡುಬರುತ್ತಿವೆ.
ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಗಾಳಿಯ ಒತ್ತಡ ಹೆಚ್ಚಾದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯ ಭಾಗದಿಂದ ಗಾಳಿಯ ಪ್ರಭಾವ ಹೆಚ್ಚಾಗುತ್ತಿರುವ ಹಿನ್ನೆಲೆ, ಏಪ್ರಿಲ್ 15 ನಂತರ ರಾಜ್ಯದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ ಇದೆ, ಮಳೆ ವ್ಯಾಪ್ತಿ ಉತ್ತರ ಒಳನಾಡಿನತ್ತವೂ ವಿಸ್ತರಿಸಬಹುದು.
Karnataka is witnessing gradual weather changes with rainfall activity beginning in coastal and southern interior regions. While northern interior districts continue to experience high temperatures, rainfall is expected to expand across the state after April 15 due to strengthening winds from the Bay of Bengal.
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…