ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

April 12, 2026
2:37 PM
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ ಕಾಣಿಸಿಕೊಳ್ಳಲಿದೆ. ಎಪ್ರಿಲ್ 15ರ ನಂತರ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಆರಂಭದ ಸೂಚನೆ ಇದೆ.

13.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಜಿಲ್ಲೆಗಳು :  ರಾಜ್ಯದ ಕರಾವಳಿ ಭಾಗಗಳಲ್ಲಿ ಇವತ್ತು ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಬಿಸಿಲು ಹಾಗೂ ಅಧಿಕ ತಾಪಮಾನದಿಂದ ಕೂಡಿದ ವಾತಾವರಣ ಮುಂದುವರಿಯಲಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ವಿಪರೀತ ಸೆಖೆಯಿಂದಾಗಿ ದಕ್ಷಿಣ ಕನ್ನಡ, ಕಾಸರಗೋಡು ಹಾಗೂ ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಅನಿರೀಕ್ಷಿತವಾಗಿ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಕಂಡುಬರುತ್ತಿದೆ. ಎಪ್ರಿಲ್ 15ರ ನಂತರ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.

 ಮಲೆನಾಡು ಜಿಲ್ಲೆಗಳು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಸಂಜೆ ವೇಳೆಯಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಎಪ್ರಿಲ್ 15ರ ನಂತರ ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಹೆಚ್ಚಾಗಲಿದೆ.

ಉತ್ತರ ಒಳನಾಡು :  ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆಯ ಪರಿಸ್ಥಿತಿ ಮುಂದುವರಿಯಲಿದೆ.  ಎಪ್ರಿಲ್ 18ರಿಂದ ಈ ಭಾಗಗಳಲ್ಲಿ ಗುಡುಗು ಮಳೆಯ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

 ದಕ್ಷಿಣ ಒಳನಾಡು :   ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರಲಿದೆ.
ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.  ಎಪ್ರಿಲ್ 15ರ ನಂತರ ಗುಡುಗು ಸಹಿತ ಮಳೆ ಆರಂಭವಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಹಿಂದೂ ಮಹಾಸಾಗರದಲ್ಲಿ ಮುಂಗಾರು ತನ್ನ ಚಲನವಲನವನ್ನು ಆರಂಭಿಸಿದೆ. ಯಾವುದೇ ವಾಯುಭಾರ ಕುಸಿತಗಳ ಅಡಚಣೆಗಳಿಲ್ಲದಿದ್ದರೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಕಡೆ ಮುಂಗಾರು ಮುಂಚಿತವಾಗಿ ಆಗಮಿಸುವ ಸಾಧ್ಯತೆ ಇದೆ.

Karnataka is expected to experience hot and mostly dry conditions across regions until mid-April, with light scattered showers in coastal and Malnad areas. Thunderstorm activity is likely to begin after April 15 in most parts, while North Interior Karnataka may see rains after April 18. Early monsoon movement has started over the Indian Ocean, indicating a possible early onset over Andaman & Nicobar Islands.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror