ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

April 14, 2026
2:10 PM
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ರೈತರು ಮಳೆಯ ನೀರನ್ನು ಸಂಗ್ರಹಿಸುವ ಯೋಜನೆಗಳನ್ನು ಈಗಲೇ ರೂಪಿಸಿಕೊಳ್ಳುವುದು ಉತ್ತಮ.

ರಾಜ್ಯದ ವಿವಿಧ ಭಾಗಗಳಲ್ಲಿ ಬಿಸಿಲಿನ ತೀವ್ರತೆ ಮುಂದುವರಿಯುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ಹಂತ ಹಂತವಾಗಿ ಮಳೆಯ ಪ್ರವೇಶವಾಗುವ ಸಾಧ್ಯತೆಗಳಿವೆ.

ಕರಾವಳಿ ಪ್ರದೇಶ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರಲಿದೆ. ಏಪ್ರಿಲ್ 18 ಅಥವಾ 19 ರಿಂದ ಮಳೆ ಆರಂಭವಾಗುವ ನಿರೀಕ್ಷೆ.

ಮಲೆನಾಡು ಪ್ರದೇಶ :  ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಂಜೆ-ರಾತ್ರಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಲಕ್ಷಣಗಳು.

ಉತ್ತರ ಒಳನಾಡು :ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಸಂಜೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಮೋಡದ ವಾತಾವರಣ. ಏಪ್ರಿಲ್ 20 ರಿಂದ ಮಳೆ ಆರಂಭವಾಗುವ ಸಾಧ್ಯತೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ರಾತ್ರಿ ಮೋಡದ ವಾತಾವರಣ ಕಂಡುಬರಲಿದೆ. ಉಳಿದ ಭಾಗಗಳಲ್ಲಿ ಸಣ್ಣ ಪ್ರಮಾಣದ ಮೋಡ ಕವಿದ ವಾತಾವರಣ. ಏಪ್ರಿಲ್ 18 ರವರೆಗೆ ಮಳೆಯ ಸಾಧ್ಯತೆ ಕಡಿಮೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಸಲಹೆ : 2026ರ ಜೂನ್ ತಿಂಗಳಲ್ಲಿ ಎಲ್ನಿನೋ ಆರಂಭವಾಗುವ ಸಾಧ್ಯತೆಗಳು ಹೆಚ್ಚುತ್ತಿದ್ದರೂ, ಮಳೆ ಸಂಪೂರ್ಣ ಕಡಿಮೆಯಾಗುವ ಸೂಚನೆಗಳು ಇಲ್ಲ. ಬಂದ ಮಳೆಯ ನೀರನ್ನು ಸಂಗ್ರಹಿಸುವ ( ಕೃಷಿ ಹೊಂಡಗಳ ಮೂಲಕ) ಯೋಜನೆ ಹಾಕಿಕೊಳ್ಳುವುದು ಉತ್ತಮ. ಇದರಿಂದ ಕೃಷಿಕರಿಗೆ, ರೈತರಿಗೆ ಹೆಚ್ಚಿನ ಅನುಕೂಲವಾಗಬಹುದು. ಇದಕ್ಕೆ ರಾಜ್ಯ ಸರ್ಕಾರದ ಸಹಾಯಧನವೂ ಲಭಿಸುವ ವರದಿಗಳಿವೆ. ಹೀಗಾಗಿ, ಬಂದ ಮಳೆಯ ನೀರನ್ನು ಕೃಷಿ ಹೊಂಡಗಳಲ್ಲಿ ಸಂಗ್ರಹಿಸುವುದು ಉತ್ತಮ. ನೀರಿನ ಸಂರಕ್ಷಣೆ ಕ್ರಮಗಳನ್ನು ಕೈಗೊಳ್ಳಬೇಕು.

Karnataka is experiencing high summer temperatures till April 15, with cloudy conditions in many regions. Rain is expected to begin gradually from April 18–20, starting in Malnad and coastal regions. Farmers are advised to store rainwater due to possible El Niño conditions in June.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
August 3, 2026
4:38 PM
by: ದ ರೂರಲ್ ಮಿರರ್.ಕಾಂ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror