ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

April 15, 2026
2:01 PM
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ. ಇದಕ್ಕೂ ಮೊದಲು ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಗಾಳಿ ಮುಂದುವರಿಯಲಿದೆ.

16.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಬಿಸಿಗಾಳಿಯ ನಡುವೆ ತುಂತುರು ಮಳೆಯ ಸಾಧ್ಯತೆ ಕಂಡುಬರುತ್ತಿದೆ.

ಕರಾವಳಿ ಪ್ರದೇಶ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಹಾಗೂ ಭಾರಿ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಘಟ್ಟದ ಕೆಳಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಗಾಳಿಯ ಒತ್ತಡ ಹೆಚ್ಚಿದಲ್ಲಿ ಇತರೆ ಭಾಗಗಳಲ್ಲಿಯೂ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈಗಿನ ಮುನ್ಸೂಚನೆಯಂತೆ ಏಪ್ರಿಲ್ 18 ರಿಂದ ಸಾಮಾನ್ಯ ಮಳೆ ಆರಂಭವಾಗಿ, ಏಪ್ರಿಲ್ 21 ರಿಂದ ಜೋರಾಗುವ ಲಕ್ಷಣಗಳಿವೆ.

ಮಲೆನಾಡು ಪ್ರದೇಶ : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಅಥವಾ ರಾತ್ರಿ ಒಂದೆರಡು ಕಡೆ ತುಂತುರು ಮಳೆಯಾಗಬಹುದು. ಚಿಕ್ಕಮಗಳೂರು ಜಿಲ್ಲೆಯ ಕರಾವಳಿಗೆ ಹೊಂದಿಕೊಂಡ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.  ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಅನಿರೀಕ್ಷಿತ ಮಳೆಯಾಗುತ್ತಿದ್ದು, ಈ ಪ್ರವೃತ್ತಿ ಮುಂದುವರಿಯುವ ಸಾಧ್ಯತೆ ಇದೆ. ಏಪ್ರಿಲ್ 18 ರಿಂದ ಮಲೆನಾಡಿನ ಕರಾವಳಿ ಸಂಪರ್ಕ ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು : ಧಾರವಾಡ, ಬೆಳಗಾವಿ ಹಾಗೂ ಗದಗ ಜಿಲ್ಲೆಗಳಲ್ಲಿ ಸಂಜೆ ವೇಳೆಯಲ್ಲಿ ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನದಿಂದ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಏಪ್ರಿಲ್ 19 ಅಥವಾ 20ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು :  ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಕಾಣಿಸಿಕೊಳ್ಳಬಹುದು. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಮುಂದುವರಿಯುವ ಸಾಧ್ಯತೆ ಇದೆ. ಈಗಾಗಲೇ ಮಳೆಯ ಲಕ್ಷಣಗಳು ಕಡಿಮೆ ಇದ್ದರೂ, ಏಪ್ರಿಲ್ 18ರಿಂದ ಪರಿಸ್ಥಿತಿ ಬದಲಾಗುವ ಸಾಧ್ಯತೆ ಇದೆ.

 ಒಟ್ಟಾರೆ, ರಾಜ್ಯದಲ್ಲಿ ಮುಂದಿನ ಎರಡು ದಿನಗಳು ಬಿಸಿಗಾಳಿ ಮುಂದುವರಿದರೂ, ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆಗಳು ಆರಂಭವಾಗುವ ಸೂಚನೆಗಳು ಇದೆ.

The weather forecast for Karnataka indicates scattered drizzles in coastal and Malnad regions, while heat conditions persist across most parts. Rainfall activity is expected to gradually increase from April 18, intensifying further after April 21.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror