ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

April 17, 2026
1:55 PM
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ ಹೆಚ್ಚಾಗಲಿದೆ. ಏಪ್ರಿಲ್ ಕೊನೆಯ ಎರಡು ವಾರಗಳಲ್ಲಿ ರಾಜ್ಯದಾದ್ಯಂತ ಉತ್ತಮ ಬೇಸಿಗೆ ಮಳೆಯ ನಿರೀಕ್ಷೆ ಇದೆ.

18.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಕಡಿಮೆಯಾಗಿ ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡ ಹಾಗೂ ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚಿರಬಹುದು ಈಗಿನಂತೆ ಎಪ್ರಿಲ್ 18ರ ನಂತರ ಮಳೆಯ ಪ್ರಮಾಣ ಹಾಗೂ ವ್ಯಾಪ್ತಿ ಹೆಚ್ಚಾಗುವ ನಿರೀಕ್ಷೆ ಇದೆ.

ಮಲೆನಾಡು : ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿಯೂ ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣ ಇದ್ದು, ಸಂಜೆ ಕೊಡಗು ಜಿಲ್ಲೆಯ ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಎಪ್ರಿಲ್ 18ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಉತ್ತರ ಒಳನಾಡು ; ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಎಪ್ರಿಲ್ 20ರಿಂದ ಮಳೆ ಆರಂಭವಾಗುವ ಸೂಚನೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣ ಇದ್ದು, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಎಪ್ರಿಲ್ಗು 20 ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರಾಜ್ಯದಾದ್ಯಂತ ತಾಪಮಾನ ಏರಿಕೆ ದಾಖಲಾಗುತ್ತಿದೆ. ಆದರೆ,  ಈಗಾಗಲೇ ಸೂಚಿಸಿದ್ದಂತೆ (ಏಪ್ರಿಲ್ 15 ನಂತರ ಬದಲಾವಣೆ), ಏಪ್ರಿಲ್ ಕೊನೆಯ ಎರಡು ವಾರಗಳಲ್ಲಿ  ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಬೇಸಿಗೆ ಮಳೆಯ ನಿರೀಕ್ಷೆ ಇದೆ.

Karnataka is currently experiencing rising temperatures, but weather conditions are expected to change from April 18. Coastal and Malnad regions will start receiving scattered thunderstorms, while North and South interior regions are likely to see rainfall from April 20. Overall, good summer rainfall is expected across the state in the last two weeks of April.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror