ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

April 18, 2026
1:37 PM
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಮುಂದುವರಿದರೂ, ಕೆಲವು ಕಡೆ ಸಂಜೆ ಗುಡುಗು ಮಳೆಯ ಸಾಧ್ಯತೆ ಇದೆ.

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡದೊಂದಿಗೆ ಅಧಿಕ ತಾಪಮಾನದ ಮುನ್ಸೂಚನೆ ಇದೆ. IMDಯ ನಕ್ಷೆಯಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದರೂ ಉಳಿದ ಮುನ್ಸೂಚನಾ ನಕ್ಷೆಗಳಲ್ಲಿ ಸಂಜೆ ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ, ಉಡುಪಿಯ ಕಾರ್ಕಳ, ಹೆಬ್ರಿ ಸುತ್ತಮುತ್ತ ಪ್ರದೇಶಗಳಲ್ಲಿ, ದಕ್ಷಿಣ ಕನ್ನಡದ ಬೆಳ್ತಂಗಡಿ, ಧರ್ಮಸ್ಥಳ, ಸುಬ್ರಹ್ಮಣ್ಯ, ಸುಳ್ಯ ಸುತ್ತಮುತ್ತ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 19ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಧಿಕ ತಾಪಮಾನ, ಬಿಸಿಲಿನೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದ್ದರೂ, ಹಾಸನ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಎಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.

ಉತ್ತರ ಒಳನಾಡು : ನಿನ್ನೆ ಅನಿರೀಕ್ಷಿತವಾಗಿ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಿತ್ತು. ಇವತ್ತು ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅತಿ ಹೆಚ್ಚು ತಾಪಮಾನದ ಮುನ್ಸೂಚನೆ ಇದ್ದರೂ, ಸಂಜೆ ಬೆಳಗಾವಿ, ಧಾರವಾಡ, ಬಾಗಲಕೋಟೆ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಎಪ್ರಿಲ್ 20 ಅಥವಾ 21ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಅಧಿಕವಾಗಲಿದ್ದು, ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ದಾವಣಗೆರೆ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.  ಈಗಿನಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆ ಇದ್ದು, ಎಪ್ರಿಲ್ 20ರಿಂದ  ನೋಡಬೇಕಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka is witnessing high temperatures across regions, but signs of seasonal transition are emerging. Coastal and Malnad districts are likely to receive rainfall starting April 19, while North Interior Karnataka may see rain activity increase from April 20–21. South Interior regions will continue to experience heat with minimal rainfall chances for now.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror