Advertisement
ಹವಾಮಾನ

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

Share

20.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಭಾಗ (ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ) : ಕರಾವಳಿ ಜಿಲ್ಲೆಗಳಲ್ಲಿ ಭಾರಿ ಸೆಖೆಯ ನಡುವೆ ಮೋಡದ ವಾತಾವರಣ ಕಂಡುಬರುತ್ತಿದ್ದು, ಮಧ್ಯಾಹ್ನದ ನಂತರ ಮಳೆಯ ಚಟುವಟಿಕೆ ಜೋರಾಗುವ ಸೂಚನೆ ಇದೆ. ಕಾಸರಗೋಡು: ಗುಡುಗು ಸಹಿತ ಸಾಮಾನ್ಯ ಮಳೆ , ದಕ್ಷಿಣ ಕನ್ನಡ, ಹಾಗೂ ಉಡುಪಿಯ ಅಲ್ಲಲ್ಲಿ ಗುಡುಗು ಸಹಿತ ಮಳೆ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆ ಸಾಧ್ಯತೆ ಇದೆ.   ಹೆಚ್ಚಿದ ಉಷ್ಣಾಂಶದಿಂದಾಗಿ ಕೆಲವೆಡೆ ಭಾರಿ ಗಾಳಿ ಬೀಸುವ ಸಾಧ್ಯತೆ ಇದೆ.  ಇಂದಿನಿಂದ ಮಳೆ ಆರಂಭವಾಗಿ ಮುಂದಿನ 2–3 ದಿನಗಳ ಕಾಲ ಮುಂದುವರಿಯುವ ಸೂಚನೆ.

ಮಲೆನಾಡು (ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ) : ಮಲೆನಾಡು ಪ್ರದೇಶದಲ್ಲಿ ಹೆಚ್ಚಿದ ತಾಪಮಾನ ಕಂಡುಬರುತ್ತಿದ್ದರೂ,  ಮಧ್ಯಾಹ್ನ ಮತ್ತು ಸಂಜೆ ವೇಳೆಯಲ್ಲಿ ಗುಡುಗು ಸಹಿತ ಮಳೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಇಂದಿನಿಂದಲೇ ಮಳೆ ಆರಂಭವಾಗುವ ಲಕ್ಷಣಗಳು ಸ್ಪಷ್ಟವಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

 ಉತ್ತರ ಒಳನಾಡು (ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಹಾವೇರಿ) : ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ, ಹಾವೇರಿ ಜಿಲ್ಲೆಯಲ್ಲಿ ಕೆಲವೇ ಕಡೆ ಮಳೆಯ ಸಾಧ್ಯತೆ ಇದೆ. ಮುಂದಿನ 3–4 ದಿನಗಳ ಕಾಲ ಮಳೆಯ ಚಟುವಟಿಕೆ ಮುಂದುವರಿಯಲಿದೆ.

 ದಕ್ಷಿಣ ಒಳನಾಡು (ಮೈಸೂರು, ಚಾಮರಾಜನಗರ, ಮಂಡ್ಯ ಸೇರಿದಂತೆ ಇತರೆಡೆ): ಹೆಚ್ಚಿದ ತಾಪಮಾನ, ಮೋಡದ ವಾತಾವರಣ ಇದ್ದು, ಮಳೆಯ ಸಾಧ್ಯತೆ ಕಡಿಮೆ, ಆದರೆ ಗಾಳಿಯ ಒತ್ತಡ ಹೆಚ್ಚಿದರೆ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ.  ಏಪ್ರಿಲ್ 23–24ರಿಂದ ಮಳೆ ಆರಂಭವಾಗುವ ಲಕ್ಷಣ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೈತರಿಗೆ ಸೂಚನೆ

  • ಗಾಳಿ ಹಾಗೂ ಮಿಂಚು ಹಾನಿ ತಪ್ಪಿಸಲು ಮುನ್ನೆಚ್ಚರಿಕೆ
  • ರಸಗೊಬ್ಬರ / ಸ್ಪ್ರೇ ಕಾರ್ಯಗಳನ್ನು ಮುಂದೆ ಯೋಜನೆ ಮಾಡಿ
  • ತೆಂಗು, ಅಡಿಕೆ ಪ್ರದೇಶಗಳಲ್ಲಿ ನೀರಿನ ನಿಲ್ಲುವಿಕೆ ತಪ್ಪಿಸಿ

Pre-monsoon rainfall activity is set to begin across Karnataka starting April 20. Coastal and Malnad regions will experience thunderstorms and scattered rains immediately, while North Interior districts will see continued rainfall over the next 3–4 days. South Interior Karnataka may see delayed rainfall starting around April 23–24. Strong winds and lightning are likely due to high temperatures.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

6 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

11 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago