ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

April 3, 2026
4:02 PM
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.

04.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : 

ಕರ್ನಾಟಕದಲ್ಲಿ ಪ್ರಸ್ತುತ ಹವಾಮಾನದಲ್ಲಿ ಗಮನಾರ್ಹ ಬದಲಾವಣೆ ಕಂಡುಬರುತ್ತಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿದಿದೆ.

ಕರಾವಳಿ ಜಿಲ್ಲೆ :  ಪಶ್ಚಿಮದ ಅಂದರೆ ಅರಬ್ಬಿ ಸಮುದ್ರದ ಗಾಳಿಯ ವಿಸ್ತರಣೆ ಕಡಿಮೆಯಾದ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇದಲ್ಲದೆ ಕಾಸರಗೋಡು ಸೇರಿದಂತೆ ಕರಾವಳಿ ಭಾಗಗಳಲ್ಲಿ ಮುಂಜಾನೆ ವೇಳೆಯಲ್ಲಿಯೂ ಮಳೆಯ ಸಾಧ್ಯತೆ ಇದೆ.
ಏಪ್ರಿಲ್ 5ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಏಪ್ರಿಲ್ 10ರಿಂದ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ.

ಮಲೆನಾಡು ಪ್ರದೇಶ : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈ ಭಾಗಗಳಲ್ಲಿ ಕೂಡ ಏಪ್ರಿಲ್ 5ರಿಂದ ಮಳೆ ತಾತ್ಕಾಲಿಕವಾಗಿ ಕಡಿಮೆಯಾಗುವ ಸಾಧ್ಯತೆ ಇದ್ದು, ಏಪ್ರಿಲ್ 10ರಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುವ ಸೂಚನೆಗಳಿವೆ.

ಉತ್ತರ ಒಳನಾಡು:  ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಏಪ್ರಿಲ್ 4ರ ನಂತರ ಈ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿವೆ.

ದಕ್ಷಿಣ ಒಳನಾಡು : ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ರಾತ್ರಿ ವೇಳೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಏಪ್ರಿಲ್ 4ರ ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಏಪ್ರಿಲ್ 10ರಿಂದ ಮಳೆ ಪುನರಾರಂಭವಾಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

 

View this post on Instagram

 

A post shared by Rural Mirror (@theruralmirror)

Karnataka is witnessing active thunderstorm activity across coastal, Malnad, and interior regions till April 5. A temporary reduction in rainfall is expected before showers resume again from April 10.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror