ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

April 21, 2026
3:17 PM
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಏಪ್ರಿಲ್ 26ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.

22.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಹಾಗೂ ಬಿಸಿಲಿನ ಮಿಶ್ರ ವಾತಾವರಣ ಮುಂದುವರಿಯಲಿದೆ.

ಕರಾವಳಿ ಭಾಗ: ಕಾಸರಗೋಡು ಜಿಲ್ಲೆಯಲ್ಲಿ ದಿನದ ವೇಳೆಯಲ್ಲಿ ಬಿಸಿಲು ಇದ್ದರೂ, ಸಂಜೆ ವೇಳೆಗೆ ಕರ್ನಾಟಕ ಗಡಿ ಭಾಗಗಳ ಕೆಲವೆಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಇದೇ ರೀತಿಯ ವಾತಾವರಣ ಮುಂದುವರಿಯಲಿದ್ದು, ಘಟ್ಟದ ಕೆಳಭಾಗಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ. ಆದರೆ ನಿನ್ನೆಗಿಂತ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಬಹುದು. ಮುಂದಿನ 3-4 ದಿನಗಳ ಕಾಲವೂ ಈ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು ಭಾಗ: ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಸಂಜೆ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಪ್ರದೇಶಗಳಿಗೆ ಹೊಂದಿಕೊಂಡ ಭಾಗಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 10 ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿಯೂ ಸಂಜೆ ಮತ್ತು ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಇತರೆ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 25ರವರೆಗೆ ಈ ಮಳೆ ಮುಂದುವರಿಯುವ ಸೂಚನೆಗಳಿವೆ.

ದಕ್ಷಿಣ ಒಳನಾಡು: ದಾವಣಗೆರೆಯ ಒಂದೆರಡು ಕಡೆ ಸಂಜೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ. ಏಪ್ರಿಲ್ 26ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka is expected to experience a mix of heat and scattered thunderstorms across regions. Coastal and Malnad areas will continue receiving evening showers for the next few days, while North Interior Karnataka may see rainfall until April 25. South Interior regions are likely to witness rainfall starting from April 26.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ – ಭಾರಿ ಮಳೆಯಿಂದ 50 ಕ್ಕೂ ಅಧಿಕ ಮಂದಿ ಸಾವು ; 10 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ
July 13, 2026
10:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ
July 13, 2026
2:42 PM
by: ಸಾಯಿಶೇಖರ್ ಕರಿಕಳ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror