ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

April 22, 2026
2:27 PM
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗಲಿದೆ. ಪ್ರತ್ಯಾವರ್ತ ಮಾರುತಗಳ ಪರಿಣಾಮದಿಂದ ಹವಾಮಾನದಲ್ಲಿ ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ.

ಕರ್ನಾಟಕ ಹವಾಮಾನ ಮುನ್ಸೂಚನೆ (23.04.2026 ಬೆಳಿಗ್ಗೆ 8 ಗಂಟೆಯವರೆಗೆ)

ರಾಜ್ಯದಲ್ಲಿ ಇತ್ತೀಚೆಗೆ ಕಂಡುಬಂದ ಮಳೆಯ ಚಟುವಟಿಕೆ ಸ್ವಲ್ಪ ಕಡಿಮೆಯಾಗುತ್ತಿರುವ ಲಕ್ಷಣಗಳಿದ್ದು, ಕೆಲವು ಭಾಗಗಳಲ್ಲಿ ಬಿಸಿಲಿನ ತಾಪಮಾನ ಮುಂದುವರಿದಿದೆ. ಆದರೆ ಮುಂದಿನ ದಿನಗಳಲ್ಲಿ ಮಳೆಯ ಹೊಸ ಚಟುವಟಿಕೆ ಆರಂಭವಾಗುವ ಸೂಚನೆಗಳು ಕಾಣಿಸುತ್ತಿವೆ.

ಕರಾವಳಿ ಭಾಗ : ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನ ದಿನ ಬಿಸಿಲು ಹೆಚ್ಚಿರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಮೋಡದ ವಾತಾವರಣ ಕಾಣಿಸಿಕೊಳ್ಳಬಹುದು.
ಮುಂಜಾನೆ ಕೆಲವು ಕಡೆ ಮಳೆಯಾದ ಹಿನ್ನೆಲೆ, ಇಂದಿನ ಮಳೆಯ ಸಾಧ್ಯತೆ ಕಡಿಮೆ.
ಮುಂದಿನ 2 ದಿನಗಳು ಮಳೆ ಕಡಿಮೆ, ಆದರೆ ಏಪ್ರಿಲ್ 25ರಿಂದ ಮಳೆ ಮತ್ತೆ ಆರಂಭವಾಗುವ ಸಾಧ್ಯತೆ ಇದೆ.

ಮಲೆನಾಡು ಭಾಗ : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಕರಾವಳಿ ಸಮೀಪದ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು.
ಏಪ್ರಿಲ್ 24ರವರೆಗೆ ಮಳೆ ಕಡಿಮೆ, ಆದರೆ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗಲಿದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಗಾಳಿಯ ಪ್ರಭಾವ ಹೆಚ್ಚಾದರೆ ಇನ್ನೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ.
ಆದರೆ ಏಪ್ರಿಲ್ 25ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿವೆ.

ದಕ್ಷಿಣ ಒಳನಾಡು : ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಲಿದ್ದು, ಸಂಜೆ ಮತ್ತು ರಾತ್ರಿ ಮೋಡದ ವಾತಾವರಣ ಕಾಣಿಸಿಕೊಳ್ಳಬಹುದು. ಏಪ್ರಿಲ್ 26ರಿಂದ ಮಳೆಯ ಆರಂಭವಾಗುವ ಸಾಧ್ಯತೆ ಇದೆ.

 ಹವಾಮಾನ ವ್ಯವಸ್ಥೆ : ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಪ್ರತ್ಯಾವರ್ತ ಮಾರುತ (Anti-Cyclonic Circulation) ಉಂಟಾಗಿದ್ದು, ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಕಾಣುವ ಸಾಧ್ಯತೆ ಇದೆ.

Karnataka is expected to witness reduced rainfall over the next two days, especially in coastal and Malnad regions. However, rainfall activity is likely to pick up again from April 25 in coastal and Malnad areas, while South Interior Karnataka may see rains from April 26. North Interior regions may experience a gradual decrease in rainfall after April 25. Anti-cyclonic circulation over Arabian Sea and Bay of Bengal may influence upcoming weather patterns.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ
June 23, 2026
7:25 AM
by: ದ ರೂರಲ್ ಮಿರರ್.ಕಾಂ
ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ
June 22, 2026
9:01 PM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಆಮದು ಪ್ರಕರಣಕ್ಕೆ ಮತ್ತೊಂದು ಹಿನ್ನಡೆ – ₹2.22 ಕೋಟಿ ಅಡಿಕೆ ಜಪ್ತಿ ಪ್ರಕರಣದಲ್ಲಿ ಕಸ್ಟಮ್ಸ್ ಕ್ರಮಕ್ಕೆ ಹೈಕೋರ್ಟ್ ಮನ್ನಣೆ
June 22, 2026
7:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror