Advertisement
ವೆದರ್ ಮಿರರ್

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

Share

24.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿಯುತ್ತಿದ್ದರೂ, ಕೆಲವು ಭಾಗಗಳಲ್ಲಿ ಮಳೆಯ ಸೂಚನೆ ಕಾಣಿಸುತ್ತಿದೆ.

ಕರಾವಳಿ ಭಾಗ: ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ತಾಪಮಾನ ಏರಿಕೆಯಾಗುವ ಲಕ್ಷಣಗಳಿವೆ. ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಕೆಲವೆಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೂ, ಇಂದಿನ ಮಟ್ಟಿಗೆ ಮಳೆಯ ಪ್ರಮಾಣ ಕಡಿಮೆ ಇರಲಿದೆ. ಆದರೆ, ಏಪ್ರಿಲ್ 25 ಅಥವಾ 26ರಿಂದ ಕರಾವಳಿಯಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ.

ಮಲೆನಾಡು ಭಾಗ: ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ತಾಪಮಾನ ಹೆಚ್ಚಾಗಲಿದೆ. ಕರಾವಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದ್ದರೂ ಅದು ಕಡಿಮೆ ಪ್ರಮಾಣದಲ್ಲಿರಬಹುದು. ಏಪ್ರಿಲ್ 25ರಿಂದ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆಗಳಿವೆ.

ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿಯೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇತರ ಭಾಗಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣ ಮುಂದುವರಿಯಲಿದೆ. ಗಾಳಿಯ ಪ್ರಭಾವ ಹೆಚ್ಚಿದಲ್ಲಿ ಕಲಬುರ್ಗಿ ಮತ್ತು ಬೀದರ್ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ.

ದಕ್ಷಿಣ ಒಳನಾಡು: ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣ ಇರಲಿದೆ.

ಒಟ್ಟಾರೆ ಸ್ಥಿತಿ:  ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಪ್ರತ್ಯಾವರ್ತ ಮಾರುತಗಳು ಮುಂದುವರಿದಿದ್ದು, ಏಪ್ರಿಲ್ ಕೊನೆಯ ವಾರ ಹಾಗೂ ಮೇ ಮೊದಲ ವಾರದಲ್ಲಿ ರಾಜ್ಯಾದ್ಯಂತ ಉತ್ತಮ ಮಳೆಯ ನಿರೀಕ್ಷೆ ಇದೆ.

Karnataka continues to experience rising temperatures across regions. While rainfall chances remain low on April 24, scattered thunderstorms are expected in parts of coastal, Malnad, and interior regions. Significant rainfall activity is likely to begin from April 25–26, with better rainfall expected across the state by the end of April and early May due to favorable wind patterns.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

8 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

8 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

8 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

12 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago