Advertisement
ವೆದರ್ ಮಿರರ್

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

Share

27.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಕೆಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಲಕ್ಷಣಗಳು ಕಾಣಿಸುತ್ತಿವೆ.

ಕರಾವಳಿ ಭಾಗ:  ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಸೆಖೆಯ ವಾತಾವರಣ ಮುಂದುವರಿದಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ನಿರೀಕ್ಷೆ ಇದೆ.
ಮುನ್ಸೂಚನೆಯಂತೆ ಉಳಿದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ಹೆಚ್ಚು ತೇವಾಂಶ ಮತ್ತು ಸೆಖೆಯ ಕಾರಣದಿಂದ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಏಪ್ರಿಲ್ 28ರಿಂದ ಕರಾವಳಿಯಲ್ಲಿ ಮಳೆ ಆರಂಭವಾಗುವ ಲಕ್ಷಣಗಳು ಸ್ಪಷ್ಟವಾಗಿವೆ.

ಮಲೆನಾಡು ಭಾಗ: ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಧಿಕ ತಾಪಮಾನ ಮುಂದುವರಿಯಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಏಪ್ರಿಲ್ 28ರಿಂದ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸೂಚನೆಗಳಿವೆ.

ದಕ್ಷಿಣ ಒಳನಾಡು: ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಕಂಡುಬರುತ್ತಿದೆ. ಇವತ್ತು ಮಳೆಯ ಸಾಧ್ಯತೆ ಕಡಿಮೆ.
ಆದರೆ ಏಪ್ರಿಲ್ 28ರಿಂದ ಈ ಭಾಗದಲ್ಲಿಯೂ ಮಳೆ ಆರಂಭವಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka is experiencing intense heat with humid conditions across regions. Coastal and Malnad areas may receive isolated thunderstorms, while interior regions remain mostly dry. Rainfall is expected to increase across the state starting April 28, bringing relief from rising temperatures.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

6 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

6 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

8 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

15 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

15 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

16 hours ago