Advertisement
ವೆದರ್ ಮಿರರ್

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

Share

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿದ್ದು, ಬಹುತೇಕ ಪ್ರದೇಶಗಳಲ್ಲಿ ಬಿಸಿಲು ಹಾಗೂ ತಾಪಮಾನ ಏರಿಕೆಯಾಗುವ ಮುನ್ಸೂಚನೆ ಇದೆ.  ಅರಬ್ಬಿ ಸಮುದ್ರದ ಕಡೆಯಿಂದ ಮೇಲ್ಸ್ತರ ಹಾಗೂ ಮಧ್ಯಮ ಸ್ತರಗಳಲ್ಲಿ ಕಡಿಮೆ ತೇವಾಂಶ ಹೊಂದಿದ ಗಾಳಿಯ ಬೀಸುವಿಕೆ ಕಾರಣವಾಗಿ ಮಳೆ ಮೋಡಗಳ ರಚನೆ ದುರ್ಬಲಗೊಳ್ಳುತ್ತಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಆದರೂ,  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಸಮಯದಲ್ಲಿ  ಸ್ಥಳೀಯ ಮೋಡಗಳ ಪರಿಣಾಮದಿಂದ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆ ಸಾಧ್ಯತೆ ಇದೆ. ಆದರೆ ಏಪ್ರಿಲ್ 6ರಿಂದ ಮಳೆ ಇನ್ನಷ್ಟು ಕಡಿಮೆಯಾಗಲಿದೆ, ಹಗಲು ಬಿಸಿಲು ಹೆಚ್ಚಾಗಲಿದೆ.

ಮಲೆನಾಡಿನಲ್ಲಿ, ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ , ಚಿಕ್ಕಮಗಳೂರು ಭಾಗಗಳಲ್ಲಿ (ಬಾಳೆಹೊನ್ನೂರು, ಶೃಂಗೇರಿ, ಕೊಪ್ಪ, ಕುದುರೆಮುಖ) ಸಂಜೆ/ರಾತ್ರಿ ತುಂತುರು ಮಳೆ ಸಾಧ್ಯತೆ ಇದೆ. ಆದರೆ, ಹಾಸನ, ಶಿವಮೊಗ್ಗ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಏಪ್ರಿಲ್ 6ರಿಂದ ಮಳೆ ಕ್ಷೀಣಿಸಿ ಬಿಸಿಲು ಹೆಚ್ಚಾಗಲಿದೆ.

ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಪ್ರಧಾನ ವಾತಾವರಣ ಕಂಡುಬರಲಿದ್ದು ಸ್ವಲ್ಪ ಮೋಡ ,  ಮಳೆಯ ಸಾಧ್ಯತೆ ಇಲ್ಲದಂತಿದೆ.

ದಕ್ಷಿಣ ಒಳನಾಡಿನಲ್ಲಿ ಮೈಸೂರು, ಚಾಮರಾಜನಗರ ಭಾಗಗಳಲ್ಲಿ  ಸಂಜೆ ವೇಳೆ ಸಾಮಾನ್ಯ ಮಳೆ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು -ಮೋಡದ ವಾತಾವರಣ ಇರಲಿದ್ದು  ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ಬಿಸಿಲು ಹೆಚ್ಚಾಗಲಿದೆ.

ಅರಬ್ಬಿ ಸಮುದ್ರದ ಗಾಳಿ ಹಾಗೂ ಕಡಿಮೆ ತೇವಾಂಶ,  ಪೂರ್ವದ ಮೋಡಗಳು ದುರ್ಬಲವಾಗುತ್ತಿರುವ ಲಕ್ಷಣ ಹಾಗೂ ಬಂಗಾಳಕೊಲ್ಲಿಯ ಗಾಳಿ ಪ್ರಭಲವಾಗದಿರುವುದರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ.

 ರೈತರಿಗೆ ಸಲಹೆ

  • ನೀರಿನ ಸಂರಕ್ಷಣೆ ಕ್ರಮ ಕೈಗೊಳ್ಳಿ
  • ಬೆಳೆಗಳಿಗೆ ಅಗತ್ಯವಿರುವ ನೀರಾವರಿ ವ್ಯವಸ್ಥೆ ಪರಿಶೀಲಿಸಿ
  • ಬಿಸಿಲಿನ ಪರಿಣಾಮದಿಂದ ಬೆಳೆ ಒಣಗದಂತೆ ಜಾಗ್ರತೆ ವಹಿಸಿ

Rainfall is expected to reduce across Karnataka from April 6, 2026, with rising temperatures and sunny conditions. Coastal and Malnad regions may receive light showers, while most areas will experience dry weather.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

3 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

8 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

20 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

2 days ago