Advertisement
ವೆದರ್ ಮಿರರ್

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

Share

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ ಸೂಚನೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ಮಾತ್ರ ಮಳೆ ಸಾಧ್ಯತೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ 10 ದಿನ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ನಿರೀಕ್ಷೆ.

ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರತೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿವೆ. 10.08.2026ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಅಲ್ಲಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಭಾಗದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ಘಟ್ಟದ ಕೆಳಗಿನ ಪ್ರದೇಶಗಳ ಸುತ್ತಮುತ್ತ 2–3 ಬಾರಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ಮಧ್ಯಾಹ್ನದ ನಂತರ ಅಥವಾ ರಾತ್ರಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗಬಹುದು.

ಸದ್ಯದ ಮುನ್ಸೂಚನೆಯಂತೆ ಕರಾವಳಿಯಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಾತ್ರ ಒಂದೆರಡು ಬಾರಿ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ. ಆ. 17 ಅಥವಾ 18ರಿಂದ ಕರಾವಳಿಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆಯೂ ಇದೆ.

ಮಲೆನಾಡಿನಲ್ಲಿ ಮಳೆ ಇಳಿಕೆ

ಕೊಡಗು, ಹಾಸನದ ಸಕಲೇಶಪುರ ಸುತ್ತಮುತ್ತ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ. ಆದರೆ ಮಳೆಯ ನಡುವಿನ ಬಿಡುವಿನ ಅವಧಿ ಹೆಚ್ಚಾಗುವ ಸಾಧ್ಯತೆ ಇದೆ.

ಆ. 11ರಿಂದ ಮಲೆನಾಡಿನಲ್ಲೂ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ. ಹೀಗಾಗಿ ಅಡಿಕೆ, ಕಾಫಿ ಸೇರಿದಂತೆ ತೋಟಗಾರಿಕಾ ಬೆಳೆಗಳ ನಿರ್ವಹಣೆಯಲ್ಲಿ ರೈತರು ಮಳೆಯ ನಡುವಿನ ಒಣ ಅವಧಿಯನ್ನು ಗಮನಿಸಿ ಕೆಲಸಗಳನ್ನು ಕೈಗೊಳ್ಳುವುದು ಸೂಕ್ತ.

ಉತ್ತರ ಒಳನಾಡಿನಲ್ಲೂ ಮಳೆ ಸೀಮಿತ

ಧಾರವಾಡ, ಹಾವೇರಿ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ.

ಸದ್ಯದ ಮುನ್ಸೂಚನೆಯಂತೆ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಹೊರತುಪಡಿಸಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದೆ. ಆ.14ರ ನಂತರ ಈ ಜಿಲ್ಲೆಗಳಲ್ಲೂ ಮಳೆ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ.

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ ಬೀಳುವ ಸಾಧ್ಯತೆ ಇದೆ.

ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರುವ ಸಾಧ್ಯತೆ ಇದೆ.

ಸದ್ಯದ ಮುನ್ಸೂಚನೆಯ ಪ್ರಕಾರ ಮುಂದಿನ 10 ದಿನಗಳಲ್ಲೂ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಮುಂಗಾರು ಪ್ರಭಲಗೊಳ್ಳುವುದು ಇನ್ನೂ ವಿಳಂಬ?

ಜಪಾನ್‌ ತೀರದಲ್ಲಿ ಉಂಟಾಗಿದ್ದ ಮಹಾ ಚಂಡಮಾರುತ ಶಿಥಿಲಗೊಂಡಿದ್ದರೂ, ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಕಡೆಯಿಂದ ಸದ್ಯ ಬೀಸುತ್ತಿರುವ ಗಾಳಿಯ ಚಲನೆ ಮುಂದುವರಿಯುವ ಲಕ್ಷಣಗಳು ಕಂಡುಬರುತ್ತಿವೆ.

ಇದರ ಪರಿಣಾಮವಾಗಿ ಮುಂಗಾರು ಮತ್ತೆ ಪ್ರಬಲಗೊಳ್ಳುವ ಪ್ರಕ್ರಿಯೆ ವಿಳಂಬವಾಗಬಹುದು ಅಥವಾ ಇದೇ ರೀತಿಯ ದುರ್ಬಲ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯೂ ಇದೆ. ಮುಂದಿನ ಕೆಲವು ದಿನಗಳ ಹವಾಮಾನ ವ್ಯವಸ್ಥೆಗಳನ್ನು ಆಧರಿಸಿ ಮಳೆಯ ಸ್ವರೂಪದಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರು ಸ್ಥಳೀಯ ಮಳೆ ಮುನ್ಸೂಚನೆಯನ್ನು ಗಮನಿಸುವುದು ಮುಖ್ಯ.

Karnataka is likely to see a gradual reduction in rainfall intensity over the coming days. Heavy rain chances have weakened along the coastal districts, while Malnad is also expected to receive intermittent normal rain with longer dry spells. North Interior Karnataka may see limited rainfall mainly in Belagavi, Dharwad and Haveri, while parts of South Interior Karnataka may continue to receive isolated thunderstorms for the next 10 days. The monsoon may take longer to strengthen as prevailing wind patterns over the Arabian Sea and Bay of Bengal continue.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

16 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

16 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

17 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

20 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago