Advertisement
ವೆದರ್ ಮಿರರ್

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

Share

16.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಕರಾವಳಿ: ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ಸಣ್ಣ ಅವಧಿಯ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಒಂದೆರಡು ಕಡೆ ಮಳೆ ತುಸು ಹೆಚ್ಚಾಗುವ ಸಾಧ್ಯತೆ ಇದೆ. ಮಧ್ಯಮ ಸ್ತರದ ಮೋಡಗಳ ಪ್ರಭಾವ ಹೆಚ್ಚಿರುವುದರಿಂದ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು.

ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಇದೇ ರೀತಿಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು: ಕೊಡಗು, ಸಕಲೇಶಪುರ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದೆ.

ಮಲೆನಾಡು ಜಿಲ್ಲೆಗಳಲ್ಲಿ ಒಟ್ಟಾರೆ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮುಂದಿನ 10 ದಿನಗಳಲ್ಲೂ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಾತ್ರ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು:ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ಗದಗ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಈಗಿನ ಮುನ್ಸೂಚನೆಯಂತೆ ಆಗಸ್ಟ್ 19ರಿಂದ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು: ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ಆಗಸ್ಟ್ 18ರಿಂದ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.

ಮಳೆ ಕಡಿಮೆಯಾಗಲು ಕಾರಣವೇನು? :  ಪಶ್ಚಿಮ ಬಂಗಾಳ ಭಾಗದಲ್ಲಿ ಮಧ್ಯಮ ಸ್ತರದ ಗಾಳಿಯ ತಿರುಗುವಿಕೆಯ ಪರಿಣಾಮವಾಗಿ ಒಡಿಶಾ, ಜಾರ್ಖಂಡ್, ಛತ್ತೀಸ್‌ಗಢ ಹಾಗೂ ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯ ವಾತಾವರಣ ಕಂಡುಬರುತ್ತಿದೆ.

ಇದರ ಜೊತೆಗೆ ಬಂಗಾಳಕೊಲ್ಲಿಯಿಂದ ಬರುವ ತೇವಾಂಶಭರಿತ ಮೋಡಗಳು ನಿರಂತರವಾಗಿ ಪೆಸಿಫಿಕ್ ಮಹಾಸಾಗರದ ಕಡೆಗೆ ಚಲಿಸುತ್ತಿರುವುದರಿಂದ ಕರ್ನಾಟಕದ ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಿಗೆ ತೇವಾಂಶದ ಪೂರೈಕೆ ಕಡಿಮೆಯಾಗಿದ್ದು, ಮಳೆಯ ಪ್ರಮಾಣವೂ ಕಡಿಮೆಯಾಗಿದೆ.

ರೈತರಿಗೆ ಸೂಚನೆ:  ಕರಾವಳಿ ಮತ್ತು ಘಟ್ಟದ ಕೆಳಭಾಗದಲ್ಲಿ ಚದುರಿದ ಮಳೆಯ ಸಾಧ್ಯತೆ ಮುಂದುವರಿಯಲಿರುವುದರಿಂದ ಕೃಷಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ಮಳೆ ಆಧಾರಿತವಾಗಿ ಯೋಜಿಸುವ ಬದಲು ಸ್ಥಳೀಯ ಮಳೆಯ ಪ್ರಮಾಣವನ್ನು ಗಮನಿಸಿ ಕೈಗೊಳ್ಳುವುದು ಸೂಕ್ತ. ಮಲೆನಾಡು ಮತ್ತು ಒಳನಾಡಿನಲ್ಲಿ ಮಳೆ ವಿರಾಮ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶವನ್ನು ಗಮನಿಸುವುದು ಮುಖ್ಯ.

ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ ಸಾಮಾನ್ಯ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದರೆ, ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 18ರಿಂದ ಮತ್ತು ಉತ್ತರ ಒಳನಾಡಿನಲ್ಲಿ ಆಗಸ್ಟ್ 19ರಿಂದ ಮಳೆ ಚಟುವಟಿಕೆ ಹೆಚ್ಚಾಗುವ ಮುನ್ಸೂಚನೆ ಇದೆ.

Karnataka is likely to see reduced rainfall activity over the coming days. Coastal districts, including Kasaragod, may continue to receive scattered short-duration showers for the next 10 days, with slightly higher rainfall possible in areas below the Western Ghats. Malnad districts are also expected to see a decline in rainfall, while some coastal-adjoining areas may receive one or two normal showers daily. Rainfall activity may begin to increase in parts of South Interior Karnataka from August 18 and North Interior Karnataka from August 19.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

9 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

11 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

11 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

12 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

2 days ago