ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

August 18, 2026
4:16 PM
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮಲೆನಾಡಿನಲ್ಲಿ ಆಗಸ್ಟ್ 21ರಿಂದ ಮಳೆ ಕಡಿಮೆಯಾಗುವ ಲಕ್ಷಣ ಕಂಡುಬಂದಿದ್ದು, ಒಳನಾಡಿನಲ್ಲಿ ಇನ್ನೂ 2–3 ದಿನ ಅಲ್ಲಲ್ಲಿ ಮಳೆಯಾಗಬಹುದು.

19.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಕರಾವಳಿ ಕರ್ನಾಟಕ :  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ತೀರ ಪ್ರದೇಶಗಳಲ್ಲಿ ಬಿಸಿಲಿನ ವಾತಾವರಣವೂ ಕಂಡುಬರಬಹುದು. ಘಟ್ಟದ ಕೆಳಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಿರಬಹುದು.

ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಇದೇ ರೀತಿಯ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸಕಲೇಶಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಆದರೆ, ಆಗಸ್ಟ್ 21ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣ ಕಂಡುಬರುತ್ತಿದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಳ್ಳಾರಿ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಗಾಳಿಯ ಒತ್ತಡ ಹೆಚ್ಚಾದರೆ ಒಂದೆರಡು ಕಡೆ ಸಾಮಾನ್ಯ ಮಳೆಯಾಗಬಹುದು.  ಮುಂದಿನ 2ರಿಂದ 3 ದಿನಗಳ ಕಾಲ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು : ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಜಿಲ್ಲೆಯ ಒಂದೆರಡು ಕಡೆಗಳಲ್ಲೂ ಮಳೆಯಾಗಬಹುದು. ಚಿತ್ರದುರ್ಗ ಜಿಲ್ಲೆಯಲ್ಲಿ ಸ್ಥಳೀಯವಾಗಿ ಗಾಳಿಯ ಒತ್ತಡ ಹೆಚ್ಚಾದರೆ ಮಾತ್ರ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 2ರಿಂದ 3 ದಿನಗಳ ಕಾಲ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ರಾಜ್ಯದ ಮಳೆಯ ಮೇಲೆ ತಿರುಗುವಿಕೆಯ ಪರಿಣಾಮ :  ಪಶ್ಚಿಮ ಬಂಗಾಳ ಮತ್ತು ಒಡಿಶಾ ಭಾಗದಲ್ಲಿ ತಲಪಿರುವ ತಿರುಗುವಿಕೆಯ ಪರಿಣಾಮ ರಾಜ್ಯದ ಮೇಲೆ ಸದ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿಲ್ಲ. ಇದರ ಪರಿಣಾಮ ಮಧ್ಯಪ್ರದೇಶ, ಉತ್ತರ ತೆಲಂಗಾಣ, ಒಡಿಶಾ, ಛತ್ತೀಸ್‌ಗಢ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ಉತ್ತಮ ಮಳೆಯಾಗುತ್ತಿದೆ.

ರೈತರಿಗೆ ಮುಖ್ಯ ಸೂಚನೆ :  ಕರಾವಳಿ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇರುವುದರಿಂದ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಾಗ ಸ್ಥಳೀಯ ಮಳೆ ಮುನ್ಸೂಚನೆ ಗಮನಿಸುವುದು ಸೂಕ್ತ. ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮುಂದಿನ 2–3 ದಿನಗಳ ಮಳೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಗೊಬ್ಬರ, ಔಷಧ ಸಿಂಪಡಣೆ ಹಾಗೂ ಇತರ ಕೃಷಿ ಚಟುವಟಿಕೆಗಳನ್ನು ಯೋಜಿಸಬಹುದು.

Karnataka is likely to see generally cloudy conditions with scattered rain across coastal, Malnad and interior districts. Coastal Karnataka may continue to receive occasional rain for the next 10 days, while rainfall in Malnad is expected to decline from August 21. North and South Interior Karnataka may experience scattered rain for the next 2–3 days.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror