Advertisement
ಸುದ್ದಿಗಳು

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

Share

20.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದರೆ, ಉತ್ತರ ಒಳನಾಡಿನಲ್ಲಿ ಆಗಸ್ಟ್ 21ರಿಂದ ಮಳೆ ಕಡಿಮೆಯಾಗಿ ಬಿಸಿಲು–ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

ಕರಾವಳಿ ಕರ್ನಾಟಕ : ಇಂದು ಮುಂಜಾನೆ ಕರಾವಳಿ ತೀರದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಒಂದೆರಡು ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಭಾಗಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಿರಬಹುದು. ಮೋಡದ ಚಲನೆ ವಾಯವ್ಯದಿಂದ ಆಗ್ನೇಯ ದಿಕ್ಕಿನತ್ತ ಇರುವುದರಿಂದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚು ಮೋಡ ಹಾಗೂ ಒಂದೆರಡು ಮಳೆಯಾಗುವ ಸಾಧ್ಯತೆ ಇದೆ.

ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ದಿನದಲ್ಲಿ ಒಂದೆರಡು ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಿರಬಹುದು.

ಸಕಲೇಶಪುರ ಸುತ್ತಮುತ್ತ ಮೋಡ ಹಾಗೂ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಬಿಟ್ಟುಬಿಟ್ಟು ತುಂತುರು ಮಳೆಯಾಗಬಹುದು. ಜಿಲ್ಲೆಯ ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.  ಶಿವಮೊಗ್ಗ ಜಿಲ್ಲೆಯಲ್ಲೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಆಗಸ್ಟ್ 21ರಿಂದ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣ ಕಂಡುಬರುತ್ತಿದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಳ್ಳಾರಿ ಹಾಗೂ ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಕಂಡುಬರಬಹುದು.

ಆಗಸ್ಟ್ 21ರಿಂದ ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆಯಾಗಿ, ಬಿಸಿಲಿನೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು :  ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಮುಖ್ಯವಾಗಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 26ರವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮುಂಗಾರು ದುರ್ಬಲವಾಗಲು ಕಾರಣವೇನು? : ಜಾರ್ಖಂಡ್ ಭಾಗದಲ್ಲಿ ತಲಪಿರುವ ತಿರುಗುವಿಕೆಯು ಮುಂದಿನ ದಿನಗಳಲ್ಲಿ ದುರ್ಬಲಗೊಳ್ಳುವ ಲಕ್ಷಣಗಳಿವೆ.

ಇದರ ನಡುವೆ ಚೀನಾದ ದಕ್ಷಿಣ ಭಾಗದಿಂದ ವಿಯೆಟ್ನಾಂ ಹಾಗೂ ಮ್ಯಾನ್ಮಾರ್‌ಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದ ತಿರುಗುವಿಕೆ ಉಂಟಾಗಿದೆ. ಇದರ ಪರಿಣಾಮ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಿಂದ ದೊರೆಯುವ ತೇವಾಂಶವು ನಿರಂತರವಾಗಿ ಫೆಸಿಫಿಕ್ ಸಾಗರದ ಕಡೆಗೆ ಸಾಗುತ್ತಿರುವುದರಿಂದ ಮುಂಗಾರು ಚಟುವಟಿಕೆ ದುರ್ಬಲಗೊಂಡಿದೆ.

ರೈತರಿಗೆ ಸೂಚನೆ :  ಕರಾವಳಿ ಭಾಗದಲ್ಲಿ ಮುಂದಿನ ಹಲವು ದಿನಗಳವರೆಗೆ ಅಲ್ಲಲ್ಲಿ ಮಳೆಯ ಸಾಧ್ಯತೆ ಇರುವುದರಿಂದ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಾಗ ಸ್ಥಳೀಯ ಮಳೆ ಮುನ್ಸೂಚನೆ ಗಮನಿಸುವುದು ಉತ್ತಮ. ವಿಶೇಷವಾಗಿ ಅಡಿಕೆ, ತೆಂಗು ಹಾಗೂ ಇತರ ತೋಟಗಾರಿಕಾ ಬೆಳೆಗಳಲ್ಲಿ ಔಷಧ ಸಿಂಪಡಣೆ, ಗೊಬ್ಬರ ನೀಡಿಕೆ ಮುಂತಾದ ಕಾರ್ಯಗಳನ್ನು ಮಳೆಯ ನಡುವಿನ ಒಣ ಅವಧಿಯನ್ನು ಗಮನಿಸಿ ಕೈಗೊಳ್ಳುವುದು ಸೂಕ್ತ.

Coastal Karnataka is expected to remain under a mix of sunshine, cloudy conditions and occasional rain for the next 10 days. Malnad is likely to see reduced rainfall from August 21, while North Interior Karnataka may turn relatively drier with sunshine and clouds. South Interior Karnataka could continue to receive scattered rain until August 26. The weakening of the Jharkhand circulation and moisture movement towards the Pacific region are contributing to weaker monsoon activity.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

7 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

7 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

23 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago