ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

August 21, 2026
4:04 PM
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯಬಹುದು. ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆ ಇದ್ದರೆ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

22.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣ ಕಡಿಮೆಯಾಗಿದ್ದು, ಮೋಡ ಕವಿದ ವಾತಾವರಣದೊಂದಿಗೆ ಮುಂದಿನ ಕೆಲವು ದಿನಗಳಲ್ಲಿ ಅಲ್ಲಲ್ಲಿ ಎರಡು–ಮೂರು ಸುತ್ತಿನ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಆಗಸ್ಟ್ 23ರಿಂದ 25ರವರೆಗೆ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಾಗಬಹುದು.

ಕರಾವಳಿ ಕರ್ನಾಟಕ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಕಡಿಮೆಯಾಗಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಎರಡು–ಮೂರು ಸುತ್ತಿನ ಮಳೆಯಾಗುವ ಸಾಧ್ಯತೆ ಇದೆ.

ಮಳೆಯಾಗುವ ಅವಧಿಯ ನಡುವೆಯೇ ಮಳೆ ಬಿಡುವಿನ ಅವಧಿಯೂ ಇರಬಹುದು. ಸದ್ಯದ ಮುನ್ಸೂಚನೆಯಂತೆ ಆಗಸ್ಟ್ 26ರವರೆಗೂ ಇದೇ ರೀತಿಯ ಮೋಡ–ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.  ಆದರೆ, ಆಗಸ್ಟ್ 23ರಿಂದ 25ರವರೆಗೆ ಒಂದೆರಡು ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕರಾವಳಿ ಹಾಗೂ ಘಟ್ಟದ ಕೆಳಭಾಗದ ಕೃಷಿ ಪ್ರದೇಶಗಳಲ್ಲಿ ಸ್ಥಳೀಯ ಮಳೆಯ ಪ್ರಮಾಣದಲ್ಲಿ ವ್ಯತ್ಯಾಸ ಕಂಡುಬರಬಹುದು.

ಮಲೆನಾಡು : ಕೊಡಗು, ಹಾಸನ ಜಿಲ್ಲೆಯ ಸಕಲೇಶಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಉಳಿದ ಭಾಗಗಳಲ್ಲಿ ಬಿಸಿಲಿನೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.  ಆಗಸ್ಟ್ 23ರಿಂದ 25ರವರೆಗೆ ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೂ, ಚಿಕ್ಕಮಗಳೂರು, ಕೊಡಗು ಹಾಗೂ ಸಕಲೇಶಪುರ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯೇ ಇರುವ ಸಾಧ್ಯತೆ ಇದೆ.

ಉತ್ತರ ಒಳನಾಡು :  ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಅಲ್ಲಲ್ಲಿ ಮೋಡಗಳು ಕಾಣಿಸಿಕೊಳ್ಳಬಹುದು.  ಈಗಿನ ಮುನ್ಸೂಚನೆಯಂತೆ ಆಗಸ್ಟ್ 25ರವರೆಗೆ ಉತ್ತರ ಒಳನಾಡಿನ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಆದರೆ ವ್ಯಾಪಕ ಮಳೆಯ ವಾತಾವರಣದ ಲಕ್ಷಣಗಳು ಸದ್ಯಕ್ಕೆ ಕಂಡುಬರುತ್ತಿಲ್ಲ.

ದಕ್ಷಿಣ ಒಳನಾಡು : ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.  ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಕಂಡುಬರಬಹುದು.

ಬಂಗಾಳಕೊಲ್ಲಿಯ ತಿರುಗುವಿಕೆಯ ಪರಿಣಾಮ :  ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್ 23ರಿಂದ 25ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಕರಾವಳಿ ಭಾಗದಲ್ಲಿ ಮಳೆ ಬಿಡುವಿನೊಂದಿಗೆ ಮತ್ತೆ ಮಳೆಯಾಗುವ ರೀತಿಯ ವಾತಾವರಣ ಕಂಡುಬರಬಹುದು.

 ರೈತರಿಗೆ ಸೂಚನೆ :  ಕರಾವಳಿ ಜಿಲ್ಲೆಗಳಲ್ಲಿ ಆ.23–25ರ ಅವಧಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಡಿಕೆ, ತೆಂಗು ಸೇರಿದಂತೆ ತೋಟಗಾರಿಕಾ ಬೆಳೆಗಳಲ್ಲಿ ಔಷಧ ಸಿಂಪಡಣೆ, ಗೊಬ್ಬರ ನೀಡಿಕೆ ಹಾಗೂ ಇತರ ಕೃಷಿ ಚಟುವಟಿಕೆಗಳನ್ನು ಮಳೆಯ ಬಿಡುವಿನ ಅವಧಿಯನ್ನು ಗಮನಿಸಿ ಕೈಗೊಳ್ಳುವುದು ಸೂಕ್ತ.

ಮಳೆಯ ಪ್ರಮಾಣ ಪ್ರದೇಶದಿಂದ ಪ್ರದೇಶಕ್ಕೆ ಬದಲಾಗುವ ಸಾಧ್ಯತೆ ಇರುವುದರಿಂದ ಸ್ಥಳೀಯ ಹವಾಮಾನ ಪರಿಸ್ಥಿತಿಯನ್ನೂ ಗಮನಿಸುವುದು ಅಗತ್ಯ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Coastal Karnataka is expected to remain relatively cloudy with reduced sunshine and two to three spells of rain in some areas. The same pattern may continue until August 26, with rainfall likely to increase slightly between August 23 and 25 due to a small circulation near the Bangladesh coast over the Bay of Bengal. Malnad may receive limited drizzle, while most of North Interior Karnataka is likely to remain sunny with partly cloudy conditions. Parts of South Interior Karnataka may receive scattered rain.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror