ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

August 2, 2026
6:59 PM
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ ಕೆಲಸಗಳಿಗೆ ಅನುಕೂಲಕರ ವಾತಾವರಣ ಸಿಗುವ ಸಾಧ್ಯತೆ ಇದೆ. ಆಗಸ್ಟ್‌ 7ರ ಬಳಿಕ ಮುಂಗಾರು ಇನ್ನಷ್ಟು ದುರ್ಬಲವಾಗುವ ಲಕ್ಷಣಗಳಿವೆ.

ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆಯ ತೀವ್ರತೆ ಇನ್ನು ಮುಂದೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಕಂಡುಬಂದಿವೆ. ಆಗಸ್ಟ್‌ 3ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದೆ. ಇದರೊಂದಿಗೆ ತೋಟಗಾರಿಕಾ ಬೆಳೆಗಳಲ್ಲಿ ಔಷಧಿ ಸಿಂಪಡಣೆ ಸೇರಿದಂತೆ ವಿವಿಧ ಕೃಷಿ ಚಟುವಟಿಕೆಗಳಿಗೆ ಅನುಕೂಲಕರ ವಾತಾವರಣ ಸಿಗುವ ಸಾಧ್ಯತೆ ಇದೆ.

Advertisement

ಕರಾವಳಿಯಲ್ಲಿ ಮಳೆ ಕಡಿಮೆಯಾಗುವ ಲಕ್ಷಣ :  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಿನ್ನೆ ಪಶ್ಚಿಮ ಘಟ್ಟದ ಸಾಲುಗಳಲ್ಲಿ ಮಧ್ಯಮ ಸ್ತರದ ಭಾರಿ ಮೋಡಗಳು ತಡೆಯಲ್ಪಟ್ಟ ಪರಿಣಾಮ ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಮುನ್ಸೂಚನೆಗಿಂತಲೂ ಹೆಚ್ಚು ಮಳೆಯಾಗಿತ್ತು. ಆದರೆ ಇಂದು ಅಂತಹ ಪರಿಸ್ಥಿತಿ ಕಂಡುಬರುವ ಸಾಧ್ಯತೆ ಕಡಿಮೆ.

ಪ್ರಸ್ತುತ ಪರಿಸ್ಥಿತಿಯಂತೆ ಇಂದಿನಿಂದ ದಿನ ಕಳೆದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕ್ರಮೇಣ ಇಳಿಮುಖವಾಗುವ ಲಕ್ಷಣಗಳಿವೆ. ಆಗಸ್ಟ್‌ 3ರಿಂದ ಅಡಿಕೆ, ತೆಂಗು ಸೇರಿದಂತೆ ತೋಟಗಾರಿಕಾ ಬೆಳೆಗಳಿಗೆ ಔಷಧಿ ಸಿಂಪಡಣೆ ಮಾಡಲು ಅವಕಾಶ ದೊರೆಯಬಹುದು. ಆದಾಗ್ಯೂ, ಸಂಪೂರ್ಣವಾಗಿ ಮಳೆ ನಿಲ್ಲುವ ಸಾಧ್ಯತೆ ಸದ್ಯಕ್ಕೆ ಕಾಣುತ್ತಿಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡಿನಲ್ಲೂ ಮಳೆ ಇಳಿಮುಖ : ನಿನ್ನೆ ಕೊಡಗು ಜಿಲ್ಲೆಯ ಬಹುತೇಕ ಭಾಗಗಳು ಹಾಗೂ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಭಾರಿ ಮಳೆಯಾಗಿತ್ತು.

ಇಂದು ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದ್ದು, ಕರಾವಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚು ಮಳೆಯಾಗಬಹುದು. ಹಾಸನ ಜಿಲ್ಲೆಯ ಸಕಲೇಶಪುರ ಭಾಗದಲ್ಲಿಯೂ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದಿನಿಂದ ದಿನ ಕಳೆದಂತೆ ಮಲೆನಾಡು ಜಿಲ್ಲೆಗಳಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಮಳೆ :  ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳ ಕೆಲವೆಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಪ್ರಸ್ತುತ ಅಂದಾಜಿನಂತೆ ಆಗಸ್ಟ್‌ 5ರವರೆಗೆ ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯಬಹುದು.

ದಕ್ಷಿಣ ಒಳನಾಡಿನಲ್ಲಿ ಚದುರಿದ ಮಳೆ : ದಾವಣಗೆರೆ, ವಿಜಯನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಒಂದೆರಡು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಮೋಡ ಕವಿದ ವಾತಾವರಣ ಕಂಡುಬರಬಹುದು.

ಆಗಸ್ಟ್‌ 9ರವರೆಗೆ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಮುಂಗಾರು ದುರ್ಬಲವಾಗುವ ಸಾಧ್ಯತೆ :  ಬಂಗಾಳ ಕೊಲ್ಲಿಯ ಶ್ರೀಲಂಕಾದ ಪೂರ್ವ ಕರಾವಳಿ ಭಾಗದಲ್ಲಿ ಆಗಸ್ಟ್‌ 4ರಂದು ಉಂಟಾಗುವ ಸಣ್ಣ ಪ್ರಮಾಣದ ವಾಯುಚಲನೆಯು ಕರ್ನಾಟಕದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಕಾಣುತ್ತಿಲ್ಲ. ಅಲ್ಲದೆ, ಆಗಸ್ಟ್‌ 7ರಂದು ದಕ್ಷಿಣ ಸುಮಾತ್ರ ದ್ವೀಪದ ಸಮೀಪ ರೂಪುಗೊಳ್ಳುವ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಚಟುವಟಿಕೆ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

Rainfall across Karnataka is expected to gradually decrease from August 3, especially in the coastal and Malnad regions. Intermittent light to moderate showers will continue, but improved weather may allow arecanut and plantation farmers to resume pesticide spraying. Monsoon activity could weaken further after August 7 due to changing weather systems over the Bay of Bengal and near Sumatra.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror