Advertisement
ವೆದರ್ ಮಿರರ್

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

Share

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಯಲ್ಲಿ ನಿಧಾನವಾಗಿ ಬದಲಾವಣೆಯ ಲಕ್ಷಣಗಳು ಕಾಣಿಸುತ್ತಿವೆ. ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದಲ್ಲಿ ಈಗಾಗಲೇ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಸದ್ಯ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದರೂ, ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು–ಮೋಡದ ವಾತಾವರಣವೇ ಹೆಚ್ಚಿದೆ. ಸೆಪ್ಟೆಂಬರ್‌ 2 ಮತ್ತು 3 ರಿಂದ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ.

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಣ್ಣ ಅವಧಿಯ ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. ಕಾರ್ಕಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3 ರ ತನಕ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಎರಡು ಮೂರು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ತುಂತುರು ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2 ಹಾಗೂ 3ರಂದು ಮಳೆಯ ಪ್ರಮಾಣ ಹೆಚ್ಚಿರುವ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಗದಗ, ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ. ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸೆಪ್ಟೆಂಬರ್ 3ರಿಂದ ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.

ಬಾಂಗ್ಲಾದೇಶ ಕರಾವಳಿಯ ತಿರುವಿಕೆ ರಾಜ್ಯದ ಮಳೆಗೆ ಪರಿಣಾಮ..? :  ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದಲ್ಲಿ ಈಗಾಗಲೇ ತಿರುವಿಕೆ ಉಂಟಾಗಿದೆ. ಈ ವ್ಯವಸ್ಥೆಯ ಪ್ರಭಾವದಿಂದ ಮುಂದಿನ ದಿನಗಳಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಸೆಪ್ಟೆಂಬರ್‌ ಆರಂಭದಲ್ಲಿ ರಾಜ್ಯದ ಮಳೆ ಚಟುವಟಿಕೆ ಸದ್ಯಕ್ಕಿಂತ ತುಸು ಚುರುಕಾಗುವ ಸಾಧ್ಯತೆ ಕಂಡುಬರುತ್ತಿದೆ. ಆದರೆ ಈ ಹಂತದಲ್ಲಿ ರಾಜ್ಯದಾದ್ಯಂತ ವ್ಯಾಪಕ ಅಥವಾ ನಿರಂತರ ಭಾರಿ ಮಳೆಯ ಬದಲಾಗಿ, ಪ್ರದೇಶವಾರು ಮಳೆ ಬೀಳುವ ಸಾಧ್ಯತೆಯೇ ಹೆಚ್ಚು.

ರೈತರಿಗೆ ಏನು ಮುಖ್ಯ? :  ಸೆಪ್ಟೆಂಬರ್‌ 2 ಮತ್ತು 3ರ ವೇಳೆಗೆ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತೋಟಗಾರಿಕಾ ಬೆಳೆಗಳ ರೈತರು ಮುಂದಿನ ಕೆಲವು ದಿನಗಳ ಹವಾಮಾನ ಬೆಳವಣಿಗೆ ಗಮನಿಸುವುದು ಮುಖ್ಯ. ಕರಾವಳಿಯಲ್ಲಿ ಸೆ.3ರವರೆಗೆ ಮಳೆ–ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಘಟ್ಟದ ಕೆಳಗಿನ ಪ್ರದೇಶಗಳು ಹಾಗೂ ಉಡುಪಿ–ಉತ್ತರ ಕನ್ನಡದ ಕೆಲವು ಕರಾವಳಿ ಭಾಗಗಳಲ್ಲಿ ಮಳೆ ತುಸು ಹೆಚ್ಚಾಗಬಹುದು.

Karnataka may see a gradual increase in rainfall activity in the coming days as a mid-level circulation has already formed near the Bangladesh coast in the Bay of Bengal. Coastal Karnataka is likely to experience intermittent showers until around September 3, while parts of Malnad may receive more rainfall on September 2–3. Rainfall is also expected to begin increasing in parts of South Interior Karnataka from September 2 and in some North Interior districts from September 3.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

4 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

3 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

3 days ago